ADVERTISEMENT

‘ಮಾತೃಪೂರ್ಣ ಯೋಜನೆ ಉದ್ದೇಶ ವಿಫಲ’

​ಪ್ರಜಾವಾಣಿ ವಾರ್ತೆ
Published 4 ಜನವರಿ 2018, 13:00 IST
Last Updated 4 ಜನವರಿ 2018, 13:00 IST

ಶಿಡ್ಲಘಟ್ಟ: ಮಾತೃಪೂರ್ಣ ಯೋಜನೆಯ ಉದ್ದೇಶ ಫಲಕಾರಿಯಾಗುತ್ತಿಲ್ಲ. ಅದರ ಬದಲಿಗೆ ಇನ್ನೇನಾದರೂ ಸೌಲಭ್ಯವನ್ನು ಪಡೆದುಕೊಳ್ಳಲು ಸರ್ಕಾರಕ್ಕೆ ಮನವಿ ಮಾಡಿ ಎಂದು ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಕೆ.ಲಕ್ಷ್ಮೀನಾರಾಯಣ ಹೇಳಿದರು.

ನಗರದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ಆಯೋಜಿಸಿದ್ದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

ಮಾತೃ ಪೂರ್ಣ ಯೋಜನೆಯಡಿ ಬಾಣಂತಿಯರಿಗೆ ಅಂಗನವಾಡಿ ಕೇಂದ್ರಗಳಲ್ಲೆ ಅಡುಗೆ ಮಾಡಿ ಬಡಿಸುವ ಮೂಲಕ ಮಕ್ಕಳಲ್ಲಿ ಪೌಷ್ಟಿಕತೆಯನ್ನು ಹೆಚ್ಚಿಸುವ ಉದ್ದೇಶದಿಂದ ಸರ್ಕಾರ ಜಾರಿಗೆ ತಂದಿರುವ ಯೋಜನೆಯಾಗಿದೆ. ಆದರೆ ಜನರು ಹೆಚ್ಚಿನ ಆಸಕ್ತಿ ತೋರಿಸುತ್ತಿಲ್ಲ, ಆದ್ದರಿಂದ ಯೋಜನೆಯ ಕುರಿತು ಸರ್ಕಾರಕ್ಕೆ ವರದಿ ಸಲ್ಲಿಸುವಂತೆ ಸೂಚಿಸಿದರು.

ADVERTISEMENT

ಅಭಿವೃದ್ಧಿಗಾಗಿ ಅಧಿಕಾರಿಗಳು ಬದ್ಧತೆಯಿಂದ ಕೆಲಸ ಮಾಡಬೇಕು. ಅರ್ಹ ಫಲಾನುಭವಿಗಳಿಗೆ ಯೋಜನೆ ತಲುಪಿಸುವಂತಹ ಕೆಲಸ ಮಾಡಬೇಕು. ಬರುತ್ತಿರುವ ಅನುದಾನ ಎಲ್ಲೆಲ್ಲಿ ಬಳಕೆ ಮಾಡಲಾಗುತ್ತಿದೆ ಎನ್ನುವುದರ ಬಗ್ಗೆ ಸದಸ್ಯರು ತಮ್ಮ ಕ್ಷೇತ್ರಗಳಲ್ಲಿ ಪರಿಶೀಲನೆ ಮಾಡಿಕೊಳ್ಳಬೇಕು. ಯೋಜನೆ ಅನುಷ್ಠಾನದ ಬಗ್ಗೆ ಮಾಹಿತಿ ಸಂಗ್ರಹಿಸಬೇಕು ಎಂದು ಅವರು ತಿಳಿಸಿದರು.

21 ಇಲಾಖೆಗಳ ಪೈಕಿ 18 ಇಲಾಖೆ ಗಳ ಅಧಿಕಾರಿಗಳು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.