ADVERTISEMENT

ಬೆಂಗಳೂರು ಚಲೋ ನಾಳೆ

​ಪ್ರಜಾವಾಣಿ ವಾರ್ತೆ
Published 4 ಫೆಬ್ರುವರಿ 2018, 5:42 IST
Last Updated 4 ಫೆಬ್ರುವರಿ 2018, 5:42 IST

ಗೌರಿಬಿದನೂರು: ಶಿಕ್ಷಣ ಇಲಾಖೆಯ ಆದೇಶಗಳಿಂದ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ಫೆಬ್ರುವರಿ 5 ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಉಪವಾಸ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ’ ಎಂದು ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಎನ್.ಸಿದ್ದರಾಮಯ್ಯ ತಿಳಿಸಿದರು.

ಪಟ್ಟಣದ ಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ಇತ್ತೀಚಿನ ದಿನಗಳಲ್ಲಿ ಶಿಕ್ಷಣ ಇಲಾಖೆ ಹೊಸ ಆದೇಶಗಳನ್ನು ಜಾರಿಗೆ ತರುವ ಮೂಲಕ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಅನ್ಯಾಯ ಮಾಡಲು ಹೊರಟಿದೆ. ಪ್ರಾಥಮಿಕ ಶಾಲೆಗಳಲ್ಲಿ ಶೇ.90 ರಷ್ಟು ಪದವಿ ಪಡೆದ ಶಿಕ್ಷಕರು ಕಾರ್ಯ ನಿರ್ವಹಿಸುತ್ತಿದ್ದಾರೆ. ಆದರೆ ಇವತ್ತು ಸರ್ಕಾರ ಪದವೀದರರ ಶಿಕ್ಷಕರನ್ನು ಕಡೆಗಣಿಸಿ ಹೊಸ ಶಿಕ್ಷಕರನ್ನು ನೇಮಕ ಮಾಡಲು ಮುಂದಾಗಿರುವುದು ಅವೈಜ್ಞಾನಿಕವಾದ್ದು, ಕೂಡಲೇ ಇದನ್ನು ರದ್ದು ಪಡಿಸಬೇಕು’ ಎಂದು ಒತ್ತಾಯಿಸಿದರು.

ಸರ್ಕಾರಿ ನೌಕರರ ಸಂಘದ ಕಾರ್ಯದರ್ಶಿ ಎನ್.ಆರ್.ಮಂಜುನಾಥ್ ಮಾತನಾಡಿ, ‘ಇವತ್ತು ಪ್ರಾಥಮಿಕ ಶಿಕ್ಷಕರು ಬಡತನದಲ್ಲಿ ಜೀವನ ನಡೆಸುತ್ತಿದ್ದಾರೆ. ಸರ್ಕಾರ ಹೊಸ ಆದೇಶಗಳನ್ನು ಜಾರಿ ತಂದರೆ ಶಿಕ್ಷಕರೆಲ್ಲಾ ಬೀದಿಗೆ ಬರಬೇಕಾದ ಸ್ಥಿತಿ ನಿರ್ಮಾಣವಾಗಲಿದೆ. ಕೂಡಲೇ ಶಿಕ್ಷಣ ಇಲಾಖೆ ಸೂಕ್ತ ಕ್ರಮ ಕೈಗೊಂಡು ಶಿಕ್ಷಕರಿಗೆ ನ್ಯಾಯ ಒದಗಿಸಿಕೊಡಬೇಕು’ ಎಂದರು.

ADVERTISEMENT

ಶಿಕ್ಷಕರಾದ ಪಿ.ವಿ.ಸುವರ್ಣಮ್ಮ, ಆರ್.ಬಿ.ಗೋಪಾಲ್, ಎಸ್.ಗುರುರಾಜ್, ಎನ್.ಇ.ಸುಬ್ರಮಣಿ, ವಿ.ಎ.ಲಕ್ಷ್ಮೀಪತಿ, ಕೆ.ಎಲ್.ಸಿಂಹಾದ್ರಿ, ಪ್ರಕಾಶ್, ಮಂಜುಳಾ, ಶಿಲ್ಪ, ಸಂಜೀವರಾಯಪ್ಪ, ಬಾಲಪ್ಪ, ಚಾಂದ್ ಬಾಷಾ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.