ADVERTISEMENT

6 ತಿಂಗಳಲ್ಲಿ ಕೆರೆಗಳಿಗೆ ನೀರು

ಮುದ್ದೇನಹಳ್ಳಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಶಾಸಕ ಡಾ.ಕೆ.ಸುಧಾಕರ್ ಹೇಳಿಕೆ

​ಪ್ರಜಾವಾಣಿ ವಾರ್ತೆ
Published 12 ಮಾರ್ಚ್ 2018, 6:30 IST
Last Updated 12 ಮಾರ್ಚ್ 2018, 6:30 IST
ಸಭೆಯಲ್ಲಿ ಶಾಸಕ ಡಾ.ಕೆ. ಸುಧಾಕರ್ ಮಾತನಾಡಿದರು.
ಸಭೆಯಲ್ಲಿ ಶಾಸಕ ಡಾ.ಕೆ. ಸುಧಾಕರ್ ಮಾತನಾಡಿದರು.   

ಚಿಕ್ಕಬಳ್ಳಾಪುರ: ‘ಬಯಲುಸೀಮೆ ಭಾಗದ ಜನರು ನೀರಿನ ಬೇಡಿಕೆ ಈಡೇರಿಸುವ ನಿಟ್ಟಿನಲ್ಲಿ ಸರ್ಕಾರ ಸಾವಿರಾರು ಕೋಟಿ ವೆಚ್ಚದಲ್ಲಿ ತ್ಯಾಜ್ಯ ನೀರು ಸಂಸ್ಕರಿಸಿ ಕೆರೆ ತುಂಬಿಸುವ ಯೋಜನೆ ಅನುಷ್ಠಾನಗೊಳಿಸುತ್ತಿದ್ದರೆ. ಅದನ್ನು ಕೆಲವರು ರಾಜಕೀಯ ದುರುದ್ದೇಶದಿಂದ ವಿರೋಧಿಸುತ್ತಿದ್ದಾರೆ. ಆ ಮೂಲಕ ಅವರು ಜನ ನಾಯಕರಾಗುವ ಯೋಗ್ಯತೆ ಕಳೆದುಕೊಳ್ಳುತ್ತಿದ್ದಾರೆ’ ಎಂದು ಶಾಸಕ ಡಾ.ಕೆ.ಸುಧಾಕರ್ ಹೇಳಿದರು.

ಮುದ್ದೇನಹಳ್ಳಿ ಭಾನುವಾರ ಆಯೋಜಿಸಿದ್ದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ ಅವರು, ‘ರೈತಪರ ಕಾಳಜಿಯೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲೆಗೆ ಕುಡಿಯುವ ನೀರಿಗಾಗಿ ಎತ್ತಿನಹೊಳೆ, ಕೃಷಿಗಾಗಿ ಹೆಬ್ಬಾಳ, ನಾಗವಾರ ಕೆರೆಗಳಲ್ಲಿನ ತ್ಯಾಜ್ಯ ನೀರು ಸಂಸ್ಕರಿಸಿ ಕೆರೆಗಳಿಗೆ ತುಂಬಿಸಲು ಮುಂದಾದರೆ ವಿರೋಧ ಪಕ್ಷಗಳು ಈ ನೀರಿನಿಂದ ಅಪಾಯವಿದೆ ಎಂದು ಅಪಪ್ರಚಾರ ಮಾಡುತ್ತಿದ್ದಾರೆ’ ಎಂದು ತಿಳಿಸಿದರು.

‘ಪಕ್ಷದ ಮುಖಂಡರ ವೈಯಕ್ತಿಕ ಭಿನ್ನಾಭಿಪ್ರಾಯಗಳನ್ನು ಬದಿಗೊತ್ತಿ, ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲಿಸ ಬೇಕು ಎನ್ನುವ ಧ್ಯೇಯದಿಂದ ಪಕ್ಷ ಸಂಘಟನೆಗೆ ಶ್ರಮಿಸಬೇಕು. ರಾಜ್ಯ ಸರ್ಕಾರ ಜಾರಿಗೊಳಿಸಿರುವ ಜನಪರ ಕಾರ್ಯಕ್ರಮಗಳ ಬಗ್ಗೆ ಮನೆ ಮನೆಗೆ ತೆರಳಿ ಮತದಾರರಲ್ಲಿ ಅರಿವು ಮೂಡಿಸುವ ಕೆಲಸ ಮಾಡಬೇಕು’ ಎಂದರು.

ADVERTISEMENT

ಖಾದಿ ಗ್ರಾಮೋದ್ಯೋಗ ಮಂಡಳಿ ಅಧ್ಯಕ್ಷ ಯಲುವಹಳ್ಳಿ ಎನ್.ರಮೇಶ್, ಮಾಜಿ ಶಾಸಕ ಎಸ್.ಎಂ. ಮುನಿಯಪ್ಪ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.