ADVERTISEMENT

ಸೋಂಕಿತರ ಸಂಖ್ಯೆ 6,436ಕ್ಕೆ ಏರಿಕೆ

​ಪ್ರಜಾವಾಣಿ ವಾರ್ತೆ
Published 19 ಸೆಪ್ಟೆಂಬರ್ 2020, 14:32 IST
Last Updated 19 ಸೆಪ್ಟೆಂಬರ್ 2020, 14:32 IST

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಶನಿವಾರ 100 ಜನರು ಕೋವಿಡ್‌ನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದರೆ, ಮತ್ತೆ 100 ಕೋವಿಡ್‌ ಪ್ರಕರಣಗಳು ವರದಿಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 6,436ಕ್ಕೆ ಏರಿಕೆಯಾಗಿದೆ.

ಈವರೆಗೆ ಜಿಲ್ಲೆಯಲ್ಲಿ 78 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. 5,423 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಸದ್ಯ ಕೋವಿಡ್‌ ಆಸ್ಪತ್ರೆಯಲ್ಲಿ 937 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಜಿಲ್ಲೆಯಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ ಶನಿವಾರದವರೆಗೆ 99,925 ಜನರ ಗಂಟಲು ದ್ರವ ಮಾದರಿ ಸಂಗ್ರಹಿಸಿದ್ದು, ಆ ಪೈಕಿ 93,339 ಜನರ ವರದಿಗಳು ನೆಗೆಟಿವ್ ಬಂದಿವೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.