ADVERTISEMENT

ಜಿಲ್ಲೆಯಲ್ಲಿ ಶೇ 83ರಷ್ಟು ಸಾಕ್ಷರತೆ

ಅಂತರರಾಷ್ಟ್ರೀಯ ಸಾಕ್ಷರತಾ ಸಪ್ತಾಹ ಉದ್ಘಾಟನೆ

​ಪ್ರಜಾವಾಣಿ ವಾರ್ತೆ
Published 20 ಸೆಪ್ಟೆಂಬರ್ 2022, 5:39 IST
Last Updated 20 ಸೆಪ್ಟೆಂಬರ್ 2022, 5:39 IST
ಚಿಕ್ಕಬಳ್ಳಾಪುರದಲ್ಲಿ ಅಂತರರಾಷ್ಟ್ರೀಯ ಸಾಕ್ಷರತಾ ಸಪ್ತಾಹ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಎನ್.ಎಂ.ನಾಗರಾಜ್ ಉದ್ಘಾಟಿಸಿದರು
ಚಿಕ್ಕಬಳ್ಳಾಪುರದಲ್ಲಿ ಅಂತರರಾಷ್ಟ್ರೀಯ ಸಾಕ್ಷರತಾ ಸಪ್ತಾಹ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಎನ್.ಎಂ.ನಾಗರಾಜ್ ಉದ್ಘಾಟಿಸಿದರು   

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ2022ನೇ ಸಾಲಿಗೆ ಸಾಕ್ಷರತೆ ಪ್ರಮಾಣವು ಶೇ 83ರಷ್ಟಿದೆ.ಉಳಿದ ಶೇ 17ರಷ್ಟು ಅನಕ್ಷರಸ್ಥರಿಗೂ ವಿದ್ಯೆ ನೀಡಿ ಸಮಾಜದ ಮುಖ್ಯವಾಹಿನಿಗೆ ತರುವ ಗುರಿಯನ್ನುಜಿಲ್ಲಾಡಳಿತವು ಹೊಂದಿದೆಎಂದು ಜಿಲ್ಲಾಧಿಕಾರಿ ಎನ್.ಎಂ.ನಾಗರಾಜ್ ತಿಳಿಸಿದರು.

ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಜಿಲ್ಲಾ ಲೋಕ ಶಿಕ್ಷಣ ಇಲಾಖೆ ಆಶ್ರಯದಲ್ಲಿ ಅಂತರರಾಷ್ಟ್ರೀಯ ಸಾಕ್ಷರತಾ ದಿನಾಚರಣೆ ಅಂಗವಾಗಿ ಸೋಮವಾರ ಆಯೋಜಿಸಿದ್ದ ಅಂತರರಾಷ್ಟ್ರೀಯ ಸಾಕ್ಷರತಾ ಸಪ್ತಾಹಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

2022-23ನೇ ಸಾಲಿನ ಲೋಕ ಶಿಕ್ಷಣ ನಿರ್ದೇಶನಾಲಯವು ಹಮ್ಮಿಕೊಂಡಿರುವ ಸಾಕ್ಷರತಾಕಾರ್ಯಕ್ರಮಗಳನ್ನು ಸಾರ್ವಜನಿಕ ಶಿಕ್ಷಣ ಇಲಾಖೆಯು ನಿರ್ವಹಿಸುತ್ತಿದೆ. ಮುಂದಿನ 2 ವರ್ಷಗಳಲ್ಲಿಸಾವಿರ ಗ್ರಾಮ ಪಂಚಾಯಿತಿಗಳನ್ನು ಸಂಪೂರ್ಣಸಾಕ್ಷರತಾ ಗ್ರಾಮ ಪಂಚಾಯಿತಿಗಳನ್ನಾಗಿಮಾಡಲಾಗುವುದು. ಈ ಕಾರ್ಯಕ್ರಮದಡಿ ಜಿಲ್ಲೆಯಲ್ಲಿ 14 ಗ್ರಾಮ ಪಂಚಾಯಿತಿಗಳಲ್ಲಿನ ಅನಕ್ಷರಸ್ಥರಿಗೆ ಶಿಕ್ಷಣ ನೀಡಿ ಸಂಪೂರ್ಣ ಸಾಕ್ಷರತಾ ಗ್ರಾಮ ಪಂಚಾಯಿತಿಗಳನ್ನಾಗಿಸಲು ಯೋಜಿಸಲಾಗಿದೆ ಎಂದರು.

ADVERTISEMENT

ಔಪಚಾರಿ ಶಿಕ್ಷಣವನ್ನು ಪಡೆಯದ, 15 ವರ್ಷ ದಾಟಿದವರನ್ನುಗುರುತಿಸಿನವಸಾಕ್ಷರರನ್ನಾಗಿ ಮಾಡುವುದೇ ಈ ದಿನಾಚರಣೆಯ ಉದ್ದೇಶವಾಗಿದೆ. ಪ್ರತಿ ಗ್ರಾಮ,ಶಾಲೆಗಳಲ್ಲಿ ಹಾಗೂ ಸಾರ್ವಜನಿಕರಲ್ಲಿ ಶಿಕ್ಷಣದ ಮಹತ್ವದ ಕುರಿತುಅರಿವು ಮೂಡಿಸಬೇಕು. ಈ ಕಾರ್ಯಕ್ಕೆ ಪ್ರತಿಯೊಬ್ಬರು ಕೈಜೋಡಿಸಬೇಕು ಎಂದು ಹೇಳಿದರು.

ಮುಂದಿನ ದಿನಗಳಲ್ಲಿಜಿಲ್ಲೆಯನ್ನು ಸಂಪೂರ್ಣ ಸಾಕ್ಷರತಾ ಜಿಲ್ಲೆಯನ್ನಾಗಿಸಬೇಕು.ಆಧುನಿಕ ಕಾಲದಲ್ಲಿಯೂ ಹೆಣ್ಣು ಮಕ್ಕಳು ಶಿಕ್ಷಣದಿಂದವಂಚಿತರಾಗುತ್ತಿದ್ದಾರೆ. ಯಾವುದೇ ಮಕ್ಕಳು ಶಾಲೆಯಿಂದ ಹೊರಗುಳಿಯಬಾರದು. ಪ್ರತಿಯೊಬ್ಬರಿಗೂಪ್ರಾಥಮಿಕ ಶಿಕ್ಷಣ ಕಡ್ಡಾಯವಾಗಿ ದೊರೆಯಬೇಕು ಎಂದರು.

ಗ್ರಾಮ ಪಂಚಾಯಿತಿ ಹಾಗೂ ನಗರದವಾರ್ಡ್‌ಗಳ ಮಟ್ಟದಲ್ಲಿ ಘಟಕಗಳನ್ನಾಗಿ ವಿಭಜಿಸಿಕೊಂಡು ಸಣ್ಣ ಸಣ್ಣ ಗುರಿಗಳ ಮೂಲಕ ಶಿಕ್ಷಣದಿಂದಹೊರಗುಳಿದವರನ್ನು ಗುರುತಿಸಿ ಶಾಲೆಗೆ ಕರೆತರುವ ಕೆಲಸವನ್ನು ಸಂಬಂಧಪಟ್ಟ ಅಧಿಕಾರಿಗಳು ಮಾಡಬೇಕುಎಂದು ಸೂಚಿಸಿದರು.

ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಪ್ರೊ.ಕೋಡಿರಂಗಪ್ಪಮಾತನಾಡಿ, ‘ಸಾಕ್ಷರತೆಯ ಕಲಿಕೆಯ ಸ್ಥಳಗಳನ್ನುಪರಿವರ್ತಿಸುವುದು’ ಎನ್ನುವುದು ಈ ವರ್ಷದಅಂತರರಾಷ್ಟ್ರೀಯ ಸಾಕ್ಷರತಾ ದಿನಾಚರಣೆಯ ಘೋಷವಾಕ್ಯವಾಗಿದೆ.ಅಕ್ಷರವು ಅರಿವನ್ನುಮೂಡಿಸುತ್ತದೆ. ಅರಿವು ಆಲೋಚನೆ, ಅಭಿವೃದ್ಧಿ ಚಿಂತನೆಗಳನ್ನು ಕಟ್ಟಿಕೊಳ್ಳುತ್ತದೆ. ಶಿಕ್ಷಣದಿಂದ ದೇಶದ ಅಭಿವೃದ್ಧಿ, ಬಡತನ ನಿವಾರಿಸಬಹುದು. ಇದನ್ನು ಪ್ರತಿಯೊಬ್ಬರು ಅರಿತುಕೊಳ್ಳಬೇಕುಎಂದರು.

ಅಧಿಕಾರಿಗಳು ಸಾಕ್ಷರತಾ ಪ್ರತಿಜ್ಞಾವಿಧಿ ಸ್ವೀಕರಿಸಿದರು.ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಮುನಿಕೆಂಚೇಗೌಡ, ಜಿಲ್ಲಾವಯಸ್ಕರ ಶಿಕ್ಷಣಾಧಿಕಾರಿ ಆಂಜನೇಯ ಇತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.