ADVERTISEMENT

ಚಿಕ್ಕಬಳ್ಳಾಪುರ: 915 ಮಂದಿಗೆ ಕೋವಿಡ್

​ಪ್ರಜಾವಾಣಿ ವಾರ್ತೆ
Published 26 ಜನವರಿ 2022, 3:19 IST
Last Updated 26 ಜನವರಿ 2022, 3:19 IST

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಮಂಗಳವಾರ 915 ಮಂದಿಗೆ ಕೋವಿಡ್ ಸೋಂಕು ತಗುಲಿದೆ. ಈ ಮೂಲಕಸಕ್ರಿಯ ಸೋಂಕಿತರ ಸಂಖ್ಯೆ 4,686ಕ್ಕೆ ತಲುಪಿದೆ. ಇದೇ ದಿನ ಚಿಂತಾಮಣಿ ತಾಲ್ಲೂಕಿನ 70 ವರ್ಷದ ಪುರುಷ ಸೋಂಕಿನಿಂದ ಮೃತಪಟ್ಟಿದ್ದಾರೆ.

ಚಿಕ್ಕಬಳ್ಳಾಪುರ ತಾಲ್ಲೂಕಿನಲ್ಲಿ 182, ಬಾಗೇಪಲ್ಲಿ 66, ಚಿಂತಾಮಣಿ 192, ಗೌರಿಬಿದನೂರು 209, ಗುಡಿಬಂಡೆ 187 ಮತ್ತು ಶಿಡ್ಲಘಟ್ಟ ತಾಲ್ಲೂಕಿನ 79 ಮಂದಿಗೆ ಮಂಗಳವಾರ ಸೋಂಕು ದೃಢಪಟ್ಟಿದೆ. 703 ರೋಗಿಗಳು ಗುಣವಾಗಿದ್ದಾರೆ.

ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 51,486 ಮಂದಿಗೆ ಕೋವಿಡ್ ಸೋಂಕು ತಗುಲಿದೆ. 46,359 ರೋಗಿಗಳು ಗುಣವಾಗಿದ್ದಾರೆ. 439 ರೋಗಿಗಳು ಮೃತಪಟ್ಟಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.