ಚಿಂತಾಮಣಿ: ಚಿಂತಾಮಣಿ-ಶಿಡ್ಲಘಟ್ಟ ರಸ್ತೆಯಲ್ಲಿರುವ ಕೋನಪ್ಪಲ್ಲಿ ಸಮೀಪ ಮಂಗಳವಾರ ದ್ವಿಚಕ್ರವಾಹನಕ್ಕೆ ಕಾರು ಡಿಕ್ಕಿಹೊಡೆದು ದ್ವಿಚಕ್ರವಾಹನ ಸವಾರ ಗಂಭೀರವಾಗಿ ಗಾಯಗೊಂಡಿದ್ದಾರೆ.
ಗಂಜಿಗುಂಟೆಯಲ್ಲಿ ಶಿಕ್ಷಕರಾಗಿರುವ ಶಿವಕುಮಾರ್ ಗಾಯಾಳು. ಅವರು ಕೆಲಸ ಮುಗಿಸಿಕೊಂಡು ನಗರದಲ್ಲಿರುವ ಮನೆಗೆ ವಾಪಸ್ ಬರುತ್ತಿದ್ದರು. ಕಾರು ನಗರದಿಂದ ಶಿಡ್ಲಘಟ್ಟ ಕಡೆಗೆ ಹೋಗುತ್ತಿತ್ತು. ಚಾಲಕನ ಅತಿವೇಗ ಮತ್ತು ಅಜಾಗರೂಕತೆ ಚಾಲನೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ.
ಡಿಕ್ಕಿ ಹೊಡೆದ ರಭಸಕ್ಕೆ ಕಾರು ರಸ್ತೆ ಪಕ್ಕದ ಹಳ್ಳಕ್ಕೆ ನುಗ್ಗಿದೆ. ಸಾರ್ವಜನಿಕರು ಗಾಯಾಳುವನ್ನು ನಗರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ವೈದ್ಯರು ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿಗೆ ಕಳುಹಿಸಿಕೊಟ್ಟಿದ್ದಾರೆ. ಕಾರು ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ.
ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.