ಚಿಕ್ಕಬಳ್ಳಾಪುರ:ಬಾಗೇಪಲ್ಲಿ ತಾಲ್ಲೂಕಿನ ಆಚೇಪಲ್ಲಿ ಕ್ರಾಸ್ ನಲ್ಲಿ ಮಂಗಳವಾರ ಬೆಳಿಗ್ಗೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್ ಹಾಗೂ ದ್ವಿಚಕ್ರ ವಾಹನ ನಡುವೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಮೃತ ವ್ಯಕ್ತಿಯನ್ನು ಪಾತಪಾಳ್ಯದ ನಿವಾಸಿ ವೆಂಕಟೇಶ್ (34) ಎಂದು ಗುರುತಿಸಲಾಗಿದೆ.
ಅಪಘಾತದ ರಭಸಕ್ಕೆ ಬೈಕ್ ನುಜ್ಜುಗುಜ್ಜಾಗಿದೆ. ಮೃತ ವೆಂಕಟೇಶ್ ಅವರು ಟ್ರ್ಯಾಕ್ಟರ್ ಚಾಲಕರಾಗಿದ್ದರು. ವಿವಾಹಿತರಾಗಿರುವ ಅವರಿಗೆ ಇಬ್ಬರು ಮಕ್ಕಳಿದ್ದಾರೆ ಎಂದು ಪೊಲೀಸರು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.