ADVERTISEMENT

‘ಜಗಜೀವನ ರಾಂ ಆದರ್ಶ ಪಾಲಿಸಿ’

​ಪ್ರಜಾವಾಣಿ ವಾರ್ತೆ
Published 6 ಏಪ್ರಿಲ್ 2021, 3:52 IST
Last Updated 6 ಏಪ್ರಿಲ್ 2021, 3:52 IST
ಶಿಡ್ಲಘಟ್ಟದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ನಡೆದ ಡಾ.ಬಾಬು ಜಗಜೀವನ ರಾಂ ಜಯಂತಿಯಲ್ಲಿ ಶಾಸಕ ವಿ. ಮುನಿಯಪ್ಪ ಮಾತನಾಡಿದರು
ಶಿಡ್ಲಘಟ್ಟದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ನಡೆದ ಡಾ.ಬಾಬು ಜಗಜೀವನ ರಾಂ ಜಯಂತಿಯಲ್ಲಿ ಶಾಸಕ ವಿ. ಮುನಿಯಪ್ಪ ಮಾತನಾಡಿದರು   

ಶಿಡ್ಲಘಟ್ಟ: ವಿದೇಶಗಳಿಂದ ಆಹಾರ ಧಾನ್ಯಗಳನ್ನು ರಫ್ತು ಮಾಡಿಕೊಳ್ಳುತ್ತಿದ್ದಂತಹ ಸಂದರ್ಭದಲ್ಲಿ ದೇಶದಲ್ಲಿ ಹಸಿರುಕ್ರಾಂತಿಯನ್ನು ಹುಟ್ಟುಹಾಕಿದ ಡಾ.ಬಾಬು ಜಗಜೀವನ ರಾಂ ಅವರ ದೂರದೃಷ್ಟಿಯಿಂದ ದೇಶದ ಎಲ್ಲಾ ವರ್ಗದ ಜನರು ನೆಮ್ಮದಿಯ ಜೀವನ ನಡೆಸುವಂತಾಗಿದೆ ಎಂದು ಶಾಸಕ ವಿ. ಮುನಿಯಪ್ಪ ಹೇಳಿದರು.

ನಗರದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಡಾ.ಬಾಬು ಜಗಜೀವನ ರಾಂ ಜಯಂತಿಯಲ್ಲಿ ಮಾತನಾಡಿದರು.

ಎನ್.ಎಸ್.ಯು.ಐ ರಾಜ್ಯ ಸಂಚಾಲಕ ಮುನೀಂದ್ರ ಮಾತನಾಡಿ, ‘ಮಹನೀಯರ ಜಯಂತ್ಯುತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲು ಸರ್ಕಾರ ₹ 25 ಸಾವಿರ ನೀಡುತ್ತಿದೆ. ಆದರೆ, ತಾಲ್ಲೂಕು ಆಡಳಿತ ಕನಿಷ್ಠ ಬ್ಯಾನರ್ ಕೂಡ ಮಾಡಿಸದೆ ಕಾಟಾಚಾರಕ್ಕೆ ಜಯಂತ್ಯುತ್ಸವವನ್ನು ಆಚರಿಸುತ್ತಿದೆ’ ಎಂದರು.

ADVERTISEMENT

ತಹಶೀಲ್ದಾರ್ ಬಿ.ಎಸ್. ರಾಜೀವ್, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಜಗದೀಶ್, ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀನಿವಾಸ್, ಕೆ.ಎನ್. ಸುಬ್ಬಾರೆಡ್ಡಿ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.