ADVERTISEMENT

ವೈಯಕ್ತಿಕ ಸ್ವಚ್ಛತೆಗೆ ಸಲಹೆ

​ಪ್ರಜಾವಾಣಿ ವಾರ್ತೆ
Published 12 ನವೆಂಬರ್ 2020, 6:45 IST
Last Updated 12 ನವೆಂಬರ್ 2020, 6:45 IST
ಗೌರಿಬಿದನೂರಿನಲ್ಲಿ ನಗರಸಭೆ ಅಧ್ಯಕ್ಷೆ ಕೆ.ಎಂ. ಗಾಯತ್ರಿ ಬಸವರಾಜ್ ಪೌರಕಾರ್ಮಿಕರ ಯೋಗಕ್ಷೇಮ ವಿಚಾರಿಸಿದರು
ಗೌರಿಬಿದನೂರಿನಲ್ಲಿ ನಗರಸಭೆ ಅಧ್ಯಕ್ಷೆ ಕೆ.ಎಂ. ಗಾಯತ್ರಿ ಬಸವರಾಜ್ ಪೌರಕಾರ್ಮಿಕರ ಯೋಗಕ್ಷೇಮ ವಿಚಾರಿಸಿದರು   

ಗೌರಿಬಿದನೂರು: ನಗರಸಭೆ ಅಧ್ಯಕ್ಷೆ ಕೆ.ಎಂ. ಗಾಯತ್ರಿ ಬಸವರಾಜ್ ಮಂಗಳವಾರ ನಗರದಲ್ಲಿ ಪೌರಕಾರ್ಮಿಕರನ್ನು ಭೇಟಿ ಮಾಡಿ ಅವರ ಕಾರ್ಯ ಯೋಜನೆ ಬಗ್ಗೆ ಮಾಹಿತಿ ಪಡೆದರು.

ಬಳಿಕ ಮಾತನಾಡಿದ ಅವರು, ವರ್ಷದ ಎಲ್ಲಾ ದಿನಗಳಲ್ಲೂ ಬಿಡುವಿಲ್ಲದೆ ಪೌರಕಾರ್ಮಿಕರು ಕೆಲಸ ಮಾಡುತ್ತಾರೆ. ಸ್ವಚ್ಛತಾ ಕಾರ್ಯ ಹಾಗೂ ನೀರು ಸರಬರಾಜು ಸೇರಿದಂತೆ ಇತರೇ ಶ್ರಮಿಕ ಕಾರ್ಯಗಳ ಮೂಲಕ ನಗರದ ನೈರ್ಮಲ್ಯ ಕಾಪಾಡಲು ಶ್ರಮಿಸುತ್ತಾರೆ. ಆ ಮೂಲಕ ಜನರ ಆರೋಗ್ಯ ಸುಸ್ಥಿರವಾಗಿರಲು ಸಹಕಾರಿಯಾಗಿದ್ದಾರೆ‌ ಎಂದರು.

ಪೌರಕಾರ್ಮಿಕರು ಅವಿರತವಾದ ಕಾರ್ಯದ ಜತೆಗೆ ವೈಯಕ್ತಿಕ ಆರೋಗ್ಯದ ಬಗ್ಗೆ ನಿಗಾವಹಿಸಬೇಕು. ಸರ್ಕಾರದಿಂದ ಪೌರಕಾರ್ಮಿಕರ ಅಭ್ಯುದಯಕ್ಕಾಗಿ ಲಭ್ಯವಿರುವ ಪ್ರತಿಯೊಂದು ಸೌಲಭ್ಯವನ್ನು ಕಲ್ಪಿಸಲಾಗುವುದು. ಜತೆಗೆ ಅವರ ಮಕ್ಕಳ ಶಿಕ್ಷಣಕ್ಕೆ ಸಹಕಾರಿಯಾಗುವ ನಿಟ್ಟಿನಲ್ಲಿ ನಗರಸಭೆಯಿಂದ ಉತ್ತಮ ಸವಲತ್ತು ಒದಗಿಸಲಾಗುವುದು ಎಂದು ಹೇಳಿದರು.

ADVERTISEMENT

ನಗರಸಭೆಯ ಹಿರಿಯ ಆರೋಗ್ಯ ನಿರೀಕ್ಷಕರಾದ ಸುರೇಶ್ ಮತ್ತು ಸುಜಾತಾ ಪೌರಕಾರ್ಮಿಕರು ಹಾಗೂ ಅವರ ಕಾರ್ಯ ಚಟುವಟಿಕೆ ಬಗ್ಗೆ ಪರಿಚಯಿಸಿದರು.

ಪೌರಕಾರ್ಮಿಕರು ನೂತನ ಅಧ್ಯಕ್ಷೆ ಗಾಯತ್ರಿ ಬಸವರಾಜ್ ಅವರಿಗೆ ಪುಷ್ಪಮಾಲೆ ಹಾಕುವ ಮೂಲಕ ಆತ್ಮೀಯವಾಗಿ ಸ್ವಾಗತಿಸಿದರು. ಸದಸ್ಯರಾದ ಖಲೀಂ ಉಲ್ಲಾ, ಗೋಪಿನಾಥ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.