ADVERTISEMENT

ಕೀಳರಿಮೆ ತೊರೆಯಲು ಸಲಹೆ

​ಪ್ರಜಾವಾಣಿ ವಾರ್ತೆ
Published 19 ಜನವರಿ 2021, 2:25 IST
Last Updated 19 ಜನವರಿ 2021, 2:25 IST
ಚಿಂತಾಮಣಿಯಲ್ಲಿ ಹಮ್ಮಿಕೊಂಡಿದ್ದ ಚಿತ್ರಕಲಾ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಬಹುಮಾನಿತ ವಿದ್ಯಾರ್ಥಿಗಳು ಹಾಗೂ ಗಣ್ಯರು
ಚಿಂತಾಮಣಿಯಲ್ಲಿ ಹಮ್ಮಿಕೊಂಡಿದ್ದ ಚಿತ್ರಕಲಾ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಬಹುಮಾನಿತ ವಿದ್ಯಾರ್ಥಿಗಳು ಹಾಗೂ ಗಣ್ಯರು   

ಚಿಂತಾಮಣಿ: ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಕೀಳರಿಮೆ ತೊರೆದು ಕೇಂದ್ರ, ರಾಜ್ಯ ಸರ್ಕಾರ ಹಾಗೂ ಸಂಘ, ಸಂಸ್ಥೆಗಳಿಂದ ಸಿಗುವ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಂಡು ಖಾಸಗಿ ಶಾಲೆಗಳೊಂದಿಗೆ ಪೈಪೋಟಿ ನಡೆಸಬೇಕು ಎಂದು ನಗರ ಠಾಣೆಯ ಇನ್‌ಸ್ಪೆಕ್ಟರ್ ಜೆ. ಆನಂದಕುಮಾರ್ ಸಲಹೆ ನೀಡಿದರು.

ನಗರದ ಸರ್ಕಾರಿ ಬಾಲಕರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಲಿಯೋ ಕ್ಲಬ್ ಆಫ್‌ ಮಾರ್ಗ್ ಮತ್ತು ಲಯನ್ಸ್ ಕ್ಲಬ್ ಸಂಯುಕ್ತವಾಗಿ ಹಸಿರೇ ಉಸಿರು ಯೋಜನೆಯಡಿ ಸರ್ಕಾರಿ ಶಾಲಾ ಮಕ್ಕಳಿಗೆ ಹಮ್ಮಿಕೊಂಡಿದ್ದ ಚಿತ್ರಕಲಾ ಸ್ಪರ್ಧೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ವಿದ್ಯಾರ್ಥಿಗಳು ಅಚಲ ಗುರಿ ಮತ್ತು ಶ್ರದ್ಧೆಯಿಂದ ವ್ಯಾಸಂಗ ಮಾಡಿ ಉತ್ತಮ ಗುಣಮಟ್ಟದ ಶಿಕ್ಷಣ ಪಡೆಯಬೇಕು ಎಂದರು.

ADVERTISEMENT

ಸರ್ಕಾರಿ ಶಾಲಾ ಮಕ್ಕಳಿಗಾಗಿ ಹಮ್ಮಿಕೊಂಡಿದ್ದ ಚಿತ್ರಕಲಾ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

ತಾಲ್ಲೂಕು ಕಚೇರಿಯ ಗೋಪಾಲಕೃಷ್ಣ, ಲಿಯೋ ಕ್ಲಬ್‌ನ ನವೀನ್ ಕುಮಾರ್, ಲಯನ್ಸ್ ಕ್ಲಬ್‌ನ ಕೆ. ಶ್ರೀನಿವಾಸನ್, ವಿ.ಆರ್. ಶ್ರೀಧರನ್, ಸೈಯದ್ ಸಿರಾಜ್, ಡೊಮ್ನೀಕ್ ರಾಜ್, ಗಾನವಿ, ಸೌಮ್ಯಾ, ಮನೋಜ್, ಯಶಸ್ವಿನಿ ನಾಗರಕ್ಷಿತ, ಸಹನಾ, ಶಿಕ್ಷಕರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.