ADVERTISEMENT

ಶಿಡ್ಲಘಟ್ಟ: ‘ಬೋದಗೂರು ಕೃಷಿ ಕ್ರಾಂತಿ’ ಕಾರ್ಯಕ್ರಮ

ಕೃಷಿ ವಸ್ತು ಪ್ರದರ್ಶನ, ವಿಚಾರಗೋಷ್ಠಿ

​ಪ್ರಜಾವಾಣಿ ವಾರ್ತೆ
Published 18 ನವೆಂಬರ್ 2021, 4:30 IST
Last Updated 18 ನವೆಂಬರ್ 2021, 4:30 IST
ಶಿಡ್ಲಘಟ್ಟ ತಾಲ್ಲೂಕಿನ ಬೋದಗೂರಿನಲ್ಲಿ ಅಂತಿಮ ವರ್ಷದ ಕೃಷಿ ಪದವಿ ವಿದ್ಯಾರ್ಥಿಗಳ ಗ್ರಾಮೀಣ ಕಾರ್ಯಾನುಭವದ ಕೊನೆಯ ದಿನದ ಕೃಷಿ ವಸ್ತು ಪ್ರದರ್ಶನದಲ್ಲಿ ವಿವಿಧ ಬೆಳೆಗಳನ್ನು ಗಣ್ಯರು ವೀಕ್ಷಿಸಿದರು
ಶಿಡ್ಲಘಟ್ಟ ತಾಲ್ಲೂಕಿನ ಬೋದಗೂರಿನಲ್ಲಿ ಅಂತಿಮ ವರ್ಷದ ಕೃಷಿ ಪದವಿ ವಿದ್ಯಾರ್ಥಿಗಳ ಗ್ರಾಮೀಣ ಕಾರ್ಯಾನುಭವದ ಕೊನೆಯ ದಿನದ ಕೃಷಿ ವಸ್ತು ಪ್ರದರ್ಶನದಲ್ಲಿ ವಿವಿಧ ಬೆಳೆಗಳನ್ನು ಗಣ್ಯರು ವೀಕ್ಷಿಸಿದರು   

ಶಿಡ್ಲಘಟ್ಟ: ಗ್ರಾಮೀಣ ಪರಿಸ್ಥಿತಿಯನ್ನು ವಿದ್ಯಾರ್ಥಿಗಳು ಅವಲೋಕಿಸಬೇಕು. ಕೃಷಿ ಸಮಸ್ಯೆಗಳನ್ನು ಅರಿಯಬೇಕು, ವಿಶ್ಲೇಷಿಸಬೇಕು ಮತ್ತು ಪರಿಹಾರಗಳನ್ನು ಕಂಡುಹಿಡಿಯಲು ಕಾರ್ಯತತ್ಪರರಾಗಬೇಕು ಎಂಬ ಉದ್ದೇಶದಿಂದ ಗ್ರಾಮೀಣ ಜಾಗೃತಿಯ ಕಾರ್ಯಾನುಭವದಲ್ಲಿ ಮೂರು ತಿಂಗಳು ಹಳ್ಳಿಯಲ್ಲಿ ಕೃಷಿ ಪದವಿ ವಿದ್ಯಾರ್ಥಿಗಳು ವಾಸ ಮಾಡಿದ್ದರು ಎಂದು ಕೃಷಿ ಮಹಾವಿದ್ಯಾಲಯದ ಡೀನ್ ಡಾ.ಎನ್.ಬಿ.ಪ್ರಕಾಶ್ತಿಳಿಸಿದರು.

ತಾಲ್ಲೂಕಿನ ಬೋದಗೂರು ಗ್ರಾಮದಲ್ಲಿ ಬುಧವಾರ ಅಂತಿಮ ವರ್ಷದ ಕೃಷಿ ಪದವಿ ವಿದ್ಯಾರ್ಥಿಗಳ ತೊಂಬತ್ತು ದಿನಗಳ ಗ್ರಾಮೀಣ ಕಾರ್ಯಾನುಭವದ ಕೊನೆಯ ದಿನದ ಕೃಷಿ ವಸ್ತು ಪ್ರದರ್ಶನ ಮತ್ತು ವಿಚಾರಗೋಷ್ಠಿಯ ‘ಬೋದಗೂರು ಕೃಷಿ ಕ್ರಾಂತಿ’ ಕಾರ್ಯಕ್ರಮದಲ್ಲಿ ಮಾತನಾಡಿದರು.

ವಿದ್ಯಾರ್ಥಿಗಳ ಮೂರು ತಿಂಗಳ ಕಾರ್ಯಚಟುವಟಿಕೆಗಳ ಚಿತ್ರ ಸಹಿತ ಮಾಹಿತಿಯುಳ್ಳ ಪುಸ್ತಕ ‘ರಾವೆ ದರ್ಪಣ’ವನ್ನು ಬಿಡುಗಡೆ ಮಾಡಿದ ಶಿಡ್ಲಘಟ್ಟ ರೇಷ್ಮೆ ಉತ್ಪಾದಕ ಕಂಪೆನಿ ಅಧ್ಯಕ್ಷ ಬೋದಗೂರು ವೆಂಕಟಸ್ವಾಮಿರೆಡ್ಡಿ ಮಾತನಾಡಿ, ‘ರೈತರಿಂದ ಕಲಿಯುವುದು ಮತ್ತು ರೈತರಿಗೆ ಕಲಿಸುವುದು’ ಎಂಬ ಉದ್ದೇಶದಿಂದ ಗ್ರಾಮೀಣ ಜಾಗೃತಿಯ ಕಾರ್ಯಾನುಭವದಲ್ಲಿ ಮೂರು ತಿಂಗಳು ಹಳ್ಳಿಯಲ್ಲಿ ವಾಸಿಸಿದ ವಿದ್ಯಾರ್ಥಿಗಳು ಬೋದಗೂರಿನ ಮನೆಮಕ್ಕಳಾಗಿದ್ದಾರೆ ಎಂದರು.

ADVERTISEMENT

ಕೃಷಿ ವಿಶ್ವವಿದ್ಯಾನಿಲಯದ ಡಾ.ಕೆ.ಮುರಳಿ ಮೋಹನ್, ಡಾ.ಸಿ.ನಾರಾಯಣಸ್ವಾಮಿ, ಡಾ.ಎಸ್.ಗಣೇಶಮೂರ್ತಿ, ಡಾ.ಸಂದೀಪ್, ಡಾ.ಪುಷ್ಪ, ಡಾ.ಸವಿತಾ, ಶಿಬಿರಾಧಿಕಾರಿ ಡಾ.ವೈ.ಎನ್.ಶಿವಲಿಂಗಯ್ಯ, ರೇಷ್ಮೆ ಇಲಾಖೆಯ ಸಹಾಯಕ ನಿರ್ದೇಶಕ ಕೆ.ತಿಮ್ಮರಾಜು, ಪಶುವೈದ್ಯಾಧಿಕಾರಿ ಡಾ.ಬಿ.ಕೆ.ರಮೇಶ್, ಪಿಡಿಒ ಕಾತ್ಯಾಯಿನಿ, ಸದಸ್ಯ ವಿಜಯೇಂದ್ರ, ವಿಶ್ವಾಸ್, ಬಿ.ಎನ್.ಸಂತೋಷ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.