ADVERTISEMENT

ಜಾತಿ ವ್ಯವಸ್ಥೆ ಸಾಮಾಜಿಕ ಪಿಡುಗು: ಜಿ.ವಿ. ಗಂಗಪ್ಪ

​ಪ್ರಜಾವಾಣಿ ವಾರ್ತೆ
Published 15 ಏಪ್ರಿಲ್ 2022, 5:13 IST
Last Updated 15 ಏಪ್ರಿಲ್ 2022, 5:13 IST
ಗುಡಿಬಂಡೆ ಪಟ್ಟಣದ ತಾಲ್ಲೂಕು ಕಚೇರಿಯಲ್ಲಿ ಅಂಬೇಡ್ಕರ್‌ ಹಾಗೂ ಬಾಬೂಜಿ ಜಯಂತಿ ಆಚರಿಸಲಾಯಿತು
ಗುಡಿಬಂಡೆ ಪಟ್ಟಣದ ತಾಲ್ಲೂಕು ಕಚೇರಿಯಲ್ಲಿ ಅಂಬೇಡ್ಕರ್‌ ಹಾಗೂ ಬಾಬೂಜಿ ಜಯಂತಿ ಆಚರಿಸಲಾಯಿತು   

ಗುಡಿಬಂಡೆ: ‘ಭಾರತದಲ್ಲಿ ಜಾತಿ ವ್ಯವಸ್ಥೆ ಸಾಮಾಜಿಕ ಪಿಡುಗಾಗಿದೆ. ಇಂದಿನ ರಾಜಕಾರಣ ಜಾತಿ, ಜಾತಿಗಳನ್ನು ಒಡೆದು ಆಳುವ ಮೂಲಕ ಜಾತಿಗೊಂದು ಜಯಂತಿ ಮಾಡುತ್ತಿದ್ದಾರೆ. ಅಂಬೇಡ್ಕರ್‌ ಅವರನ್ನು ಮೂಲೆಗುಂಪು ಮಾಡುತ್ತಿರುವುದಕ್ಕೆ ಇಂದಿನ ಸಭೆಗೆ ಅಧಿಕಾರಿಗಳು ಗೈರುಹಾಜರಾಗಿರುವುದೇ ಸಾಕ್ಷಿಯಾಗಿದೆ’ ಎಂದು ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ಜಿ.ವಿ. ಗಂಗಪ್ಪ ದೂರಿದರು.

ಪಟ್ಟಣದ ತಾಲ್ಲೂಕು ಕಚೇರಿ ಆವರಣದಲ್ಲಿ ನಡೆದ ಡಾ.ಬಿ.ಆರ್. ಅಂಬೇಡ್ಕರ್, ಬಾಬು ಜಗಜೀವನ ರಾಂ, ಮಹಾವೀರ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಅಂಬೇಡ್ಕರ್‌ ಅವರ ಸಿದ್ಧಾಂತ ಪಾಲಿಸುವ ಮೂಲಕ ನಾವು ಮುಂದಿನ ಪೀಳಿಗೆಗೆ ಮಾದರಿಯಾಗಬೇಕಾಗಿದೆ. ಪಟ್ಟಣದಲ್ಲಿ ಹಲವಾರು ವರ್ಷಗಳಿಂದ ಸಾರ್ವಜನಿಕರ ಹಾಗೂ ದಲಿತರ ಬೇಡಿಕೆಯಾಗಿದ್ದ ಅಂಬೇಡ್ಕರ್‌ ಪ್ರತಿಮೆ ಅನಾವರಣ, ಭವನದ ಶಂಕುಸ್ಥಾಪನೆ ಮಾಡಲಾಗುತ್ತಿದೆ ಎಂದರು.

ADVERTISEMENT

ತಹಶೀಲ್ದಾರ್ ಸಿಗ್ಬತ್‌ಉಲ್ಲಾ ಮಾತನಾಡಿ, ಮುಂದಿನ ಪೀಳಿಗೆಗೆ ನಮ್ಮೆಲ್ಲರ ಕೊಡುಗೆ ಅತ್ಯಮೂಲ್ಯವಾಗಿದೆ. ನಮ್ಮ ನಡೆ, ನುಡಿಯನ್ನು ಮಕ್ಕಳು ಗಮನಿಸುತ್ತಿರುತ್ತಾರೆ. ಅವರಿಗೆ ನಾವು ಆದರ್ಶವಾಗಿ ಬದುಕಬೇಕಿದೆ ಎಂದು ತಿಳಿಸಿದರು.

ಕಸಾಪ ಅಧ್ಯಕ್ಷ ಸುಬ್ಬರಾಯಪ್ಪ ಮಾತನಾಡಿದರು.ಕಾರ್ಯಕ್ರಮದಲ್ಲಿ ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ರವೀಂದ್ರ, ತಹಶೀಲ್ದಾರ್ ಮಹೇಶ್ ಪತ್ರಿ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ರವಿ, ಕಚೇರಿ ಅಧೀಕ್ಷಕ ದಾಸಪ್ಪ, ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಬಶೀರ ರಿಜ್ವಾನ್, ಉಪಾಧ್ಯಕ್ಷ ಅನಿಲ್ ಕುಮಾರ್, ಮುಖ್ಯಾಧಿಕಾರಿ ರಾಜಶೇಖರ್, ಬಿಸಿಎಂ ರಾಮಯ್ಯ, ಸಿಡಿಪಿಒ ರಫೀಕ್, ಕೃಷಿ ಇಲಾಖೆಯ ಎಡಿಎ ಅಮರನಾರಾಯಣರೆಡ್ಡಿ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಕೆ.ವಿ. ನಾರಾಯಣಸ್ವಾಮಿ, ಸಬ್ ಇನ್‌ಸ್ಪೆಕ್ಟರ್ ಪ್ರತಾಪ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ನರಸಿಂಹಮೂರ್ತಿ, ರಾಜ್ಯ ದಿಗಂಬರ ಜೈನ್ ಟ್ರಸ್ಟ್ ಅಧ್ಯಕ್ಷ ಪುಟ್ಟಣಯ್ಯ, ಮುಖಂಡರಾದ ಜಿ.ವಿ. ಗಂಗಪ್ಪ, ಅಮರಾವತಿ, ರಮಣಪ್ಪ, ನಾರಾಯಣಸ್ವಾಮಿ, ಸುಬ್ಬರಾಯಪ್ಪ, ರಾಮಾಂಜನೇಯ, ಕದಿರಪ್ಪ, ಚನ್ನರಾಯಪ್ಪ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.