ಬಾಗೇಪಲ್ಲಿ: ತಾಲ್ಲೂಕಿನ ಜೂಲಪಾಳ್ಯ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಆಶಾ ಕಾರ್ಯಕರ್ತೆ ನಾಗವೇಣಿ (39) ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಜೂಲಪಾಳ್ಯ ಗ್ರಾಮದಲ್ಲಿ ಸೋಮವಾರ ಮಧ್ಯಾಹ್ನ ಕಾರ್ಯ ನಿರ್ವಹಿಸುತ್ತಿದ್ದಾಗ ಎದೆ ನೋವು ಕಾಣಿಸಿಕೊಂಡಿದೆ. ತಕ್ಷಣ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ನೀಡಲಾಗಿದೆ. ಚಿಕಿತ್ಸೆ ಪಡೆಯುತ್ತಿದ್ದ ಸಂದರ್ಭದಲ್ಲಿ ಹೃದಯಾಘಾತ ಆಗಿ ಮೃತ ಪಟ್ಟಿದ್ದಾರೆ ಎಂದು ಕುಟುಂಬ ಸದಸ್ಯರು ತಿಳಿಸಿದ್ದಾರೆ. ಅವರಿಗೆ ಪತಿ, ಇಬ್ಬರು ಮಕ್ಕಳು ಇದ್ದಾರೆ. ಜೂಲಪಾಳ್ಯ ಗ್ರಾಮದಲ್ಲಿ ಮಂಗಳವಾರ ಅಂತ್ಯಕ್ರಿಯೆನಡೆದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.