ADVERTISEMENT

ಅಧಿಕಾರಿ ಮೇಲೆ ಪುರಸಭೆ ಸದಸ್ಯನಿಂದ ಹಲ್ಲೆ: ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 22 ಜನವರಿ 2021, 1:36 IST
Last Updated 22 ಜನವರಿ 2021, 1:36 IST
ಶಿಡ್ಲಘಟ್ಟದ ತಾಲ್ಲೂಕು ಕಚೇರಿಯ ಮುಂದೆ ಪೌರ ನೌಕರರ ಸೇವಾ ಸಂಘದ ಸದಸ್ಯರು ಪ್ರತಿಭಟನೆ ನಡೆಸಿ ಶಿರಸ್ತೇದಾರ್ ಮಂಜುನಾಥ್ ಅವರಿಗೆ ಮನವಿ ಸಲ್ಲಿಸಿದರು
ಶಿಡ್ಲಘಟ್ಟದ ತಾಲ್ಲೂಕು ಕಚೇರಿಯ ಮುಂದೆ ಪೌರ ನೌಕರರ ಸೇವಾ ಸಂಘದ ಸದಸ್ಯರು ಪ್ರತಿಭಟನೆ ನಡೆಸಿ ಶಿರಸ್ತೇದಾರ್ ಮಂಜುನಾಥ್ ಅವರಿಗೆ ಮನವಿ ಸಲ್ಲಿಸಿದರು   

ಶಿಡ್ಲಘಟ್ಟ: ಚಿಂಚೋಳಿ ಪುರಸಭೆ ಮುಖ್ಯಾಧಿಕಾರಿ ಅಭಯ್ ಕುಮಾರ್ ಮೇಲೆ ಪುರಸಭೆ ಸದಸ್ಯ ಆನಂದ್ ಟೈಗರ್ ಹಲ್ಲೆ ಮಾಡಿರುವುದನ್ನು ಖಂಡಿಸಿ ಕರ್ನಾಟಕ ರಾಜ್ಯ ಪೌರ ನೌಕರರ ಸೇವಾ ಸಂಘದ ತಾಲ್ಲೂಕು ಘಟಕದ ಸದಸ್ಯರು ಪ್ರತಿಭಟನೆ ನಡೆಸಿ ಶಿರಸ್ತೇದಾರ್ ಮಂಜುನಾಥ್ ಅವರಿಗೆ ಮನವಿಯನ್ನು ಗುರುವಾರ ಸಲ್ಲಿಸಿದರು.

‘ನಗರಸಭೆಯ ನಿಷ್ಠಾವಂತ ಅಧಿಕಾರಿ ಮೇಲೆ ಹಲ್ಲೆ ಮಾಡಿರುವವರ ಮೇಲೆ ಕಾನೂನಿನ ರೀತಿ ಶಿಕ್ಷೆ ಆಗಬೇಕು. ಅಲ್ಲದೆ ಆನಂದ್ ಟೈಗರ್ ಕಾನೂನು ಬಾಹಿರ ಬಿಲ್ಲುಗಳಿಗೆ ಸಹಿ ಹಾಕಲು ಒತ್ತಡ ಹಾಕುತ್ತಿದ್ದ. ದೌರ್ಜನ್ಯದಿಂದ ಅಧಿಕಾರಿಯ ಮೇಲೆ ಹಲ್ಲೆ ನಡೆಸಿದ್ದಾರೆ. ಹಲ್ಲೆ ಮಾಡುತ್ತಿರುವ ದೃಶ್ಯಗಳು ಸಿ.ಸಿ ಟಿ.ವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಐ.ಪಿ.ಸಿ. ಸೆಕ್ಷನ್ 307, 355, 341, 504, 506 ಮತ್ತು 332 ಪ್ರಕಾರ ಕಾನೂನಿನ ರೀತಿ ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ತ್ಯಾಗರಾಜು, ಕರ್ನಾಟಕ ರಾಜ್ಯ ಪೌರಸೇವಾ ನೌಕರರ ಸೇವಾ ಸಂಘ ಜಿಲ್ಲಾಧ್ಯಕ್ಷ ಮುರಳಿ, ತಾಲ್ಲೂಕು ಶಾಖೆ ಅಧ್ಯಕ್ಷ ಮಂಜು ಕುಮಾರ್, ಗೌರವಾಧ್ಯಕ್ಷ ಸಿ.ಎನ್ ವೆಂಕಟೇಶ್, ಉಪಾಧ್ಯಕ್ಷ ಕುಮಾರ್, ನಗರ ಸಭೆ ಸಿಬ್ಬಂದಿ ಎನ್. ನಾಗರಾಜ್, ಶಿವಶಂಕರ್, ಮಂಜುನಾಥ್, ಮುನಿಕೃಷ್ಣ, ವಿ.ಆರ್ ವೆಂಕಟೇಶ್, ಅಮರ್ ಹಾಜರಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.