ADVERTISEMENT

ಸಹಾಯಕ ಆಡಳಿತಾಧಿಕಾರಿ ರಾಮಕೃಷ್ಣನ್ ಅಮಾನತು

​ಪ್ರಜಾವಾಣಿ ವಾರ್ತೆ
Published 23 ಸೆಪ್ಟೆಂಬರ್ 2020, 16:39 IST
Last Updated 23 ಸೆಪ್ಟೆಂಬರ್ 2020, 16:39 IST

ಚಿಕ್ಕಬಳ್ಳಾಪುರ: ಆರೋಗ್ಯ ಸಚಿವ ಬಿ.ಶ್ರೀರಾಮುಲು ಹೆಸರು ಉಲ್ಲೇಖಿಸಿ ವೈದ್ಯರೊಬ್ಬರಿಗೆ ಹಣ ನೀಡುವಂತೆ ಸೂಚಿಸಿದ್ದ ಜಿಲ್ಲಾ ಆರೋಗ್ಯಾಧಿಕಾರಿ (ಡಿಎಚ್‌ಒ) ಕಚೇರಿಯ ಸಹಾಯಕ ಆಡಳಿತಾಧಿಕಾರಿ ಎನ್.ರಾಮಕೃಷ್ಣನ್ ಅವರ‌ನ್ನು ಅಮಾನತುಗೊಳಿಸಲಾಗಿದೆ.

ರಾಮಕೃಷ್ಣನ್ ಮತ್ತು ಚಿಂತಾಮಣಿ ಸರ್ಕಾರಿ ಆಸ್ಪತ್ರೆಯ ವೈದ್ಯರೊಬ್ಬರ ನಡುವೆ ನಡೆದಿದೆ ಎನ್ನಲಾದ ಮೊಬೈಲ್ ಸಂಭಾಷಣೆಯ ಎರಡು ಆಡಿಯೊಗಳು ಮಂಗಳವಾರ ವೈರಲ್ ಆಗಿದ್ದವು. ಅದರ ಬೆನ್ನಲ್ಲೇ ಸಚಿವ ಶ್ರೀರಾಮುಲು ಅವರು ದಾಖಲೆಗಳನ್ನು ಪರಿಶೀಲಿಸಿ ರಾಮಕೃಷ್ಣನ್ ಅವರ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಲು ಇಲಾಖೆಯ ಆಯುಕ್ತರಿಗೆ ಸೂಚನೆ ನೀಡಿದ್ದಾಗಿ ಟ್ವಿಟ್‌ ಮಾಡಿದ್ದರು.

ಇನ್ನೊಂದೆಡೆ ರಾಮಕೃಷ್ಣನ್ ಅವರನ್ನು ಅಮಾನತುಗೊಳಿಸುವಂತೆ ಕೋರಿ ಆರೋಗ್ಯ ಇಲಾಖೆ ಆಯುಕ್ತರಿಗೆ ಜಿಲ್ಲಾ ಆರೋಗ್ಯಾಧಿಕಾರಿ ಇಂದಿರಾ.ಆರ್ ಕಬಾಡೆ ಸಹ ಪತ್ರ ಬರೆದಿದ್ದರು. ಡಿಎಚ್‌ಒ ಅವರ ಶಿಫಾರಸ್ಸಿನ ಆಧಾರದಲ್ಲಿ ಆರೋಗ್ಯ ಇಲಾಖೆ ಆಯುಕ್ತ ಪಂಕಜ್ ಕುಮಾರ್ ಪಾಂಡೆ ಅವರು ಮಂಗಳವಾರವೇ ರಾಮಕೃಷ್ಣನ್‌ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.