ADVERTISEMENT

ಬಿಜೆಪಿ ವಿರುದ್ಧ ಟೀಕೆ

​ಪ್ರಜಾವಾಣಿ ವಾರ್ತೆ
Published 3 ಡಿಸೆಂಬರ್ 2020, 7:54 IST
Last Updated 3 ಡಿಸೆಂಬರ್ 2020, 7:54 IST

ಚಿಂತಾಮಣಿ: ‘ಚುನಾವಣೆಗಳಲ್ಲಿ ಮತ ಪಡೆಯುವ ಸಲುವಾಗಿ ಜಾತಿ ಹಾಗೂ ಭಾಷೆಗಳ ನಡುವೆ ಭಿನ್ನಾಭಿಪ್ರಾಯ ಮೂಡಿಸಿ ಒಡೆದು ಆಳುವ ತಂತ್ರ ಮಾಡುತ್ತಿರುವ ಬಿಜೆಪಿ ನಾಯಕರು ಕಾಂಗ್ರೆಸ್ ಪಕ್ಷದಲ್ಲಿನ ಅತ್ಯಲ್ಪ ಲೋಪದೋಷಗಳನ್ನು ಭೂತಕನ್ನಡಿಯಲ್ಲಿ ನೋಡುವ ಪ್ರಯತ್ನ ಮಾಡಬಾರದು’ ಎಂದು ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಕೋನಪ್ಪಲ್ಲಿ ಕೋದಂಡ ಟೀಕಿಸಿದ್ದಾರೆ.

ನಗರದಲ್ಲಿ ಈಚೆಗೆ ಬಿಜೆಪಿ ಹಮ್ಮಿಕೊಂಡಿದ್ದ ಗ್ರಾಮ ಸ್ವರಾಜ್ ಕಾರ್ಯಕ್ರಮದಲ್ಲಿ ಮುಖಂಡರು ಕಾಂಗ್ರೆಸ್ ಪಕ್ಷವನ್ನು ತುಷ್ಟೀಕರಣ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿರುವುದು ಖಂಡನೀಯ. ಮತಗಳಿಕೆಗಾಗಿ ಬಲಾಢ್ಯರ ತುಷ್ಟೀಕರಣ ಮಾಡುತ್ತಾ ಸಮಾಜದ ಶಾಂತಿ, ನೆಮ್ಮದಿ ಹಾಳು ಮಾಡುತ್ತಾ ಅನೈತಿಕ ರಾಜಕಾರಣ ಮಾಡುತ್ತಿರುವ ಕೀರ್ತಿ ಬಿಜೆಪಿಗೆ ಸಲ್ಲುತ್ತದೆ ಎಂದು ದೂರಿದ್ದಾರೆ.

ಕಾಂಗ್ರೆಸ್ ಪಕ್ಷವು ದೇಶ ವಿರೋಧಿ ಶಕ್ತಿಗಳನ್ನು ಪುಷ್ಟೀಕರಿಸುವುದಕ್ಕೆ ಎಂದೂ ಇಳಿದಿಲ್ಲ ಎಂದು
ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.