ಚಿಂತಾಮಣಿ: ಚಿಂತಾಮಣಿ-ಬೆಂಗಳೂರು ರಾಜ್ಯ ಹೆದ್ದಾರಿಯ ಚಿನ್ನಸಂದ್ರದ ಬಳಿ ಸೋಮವಾರ ರಾತ್ರಿ ಖಾಸಗಿ ಬಸ್ ಆಟೊಗೆ ಡಿಕ್ಕಿ ಹೊಡೆದು ಆಟೊ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಚಾಲಕನನ್ನು ಬೆಂಗಳೂರಿನ ನಿವಾಸಿ ನಾಗರಾಜಾಚಾರಿ (58) ಎಂದು ಗುರುತಿಸಲಾಗಿದೆ. ಆಟೊದಲ್ಲಿದ್ದ ಅವರ ಪತ್ನಿ ಸುಗುಣ ಗಾಯಗೊಂಡಿದ್ದಾರೆ. ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿಗೆ ಕಳುಹಿಸಲಾಗಿದೆ.
ಕೋಲಾರ ಜಿಲ್ಲೆ ನರಸಾಪುರ ಕೈಗಾರಿಕಾ ಪ್ರಾಂಗಣದ ವಿಸ್ತಾರ್ ಕಂಪನಿಗೆ ಸೇರಿದ ಬಸ್ ಆಟೊಗೆ ಡಿಕ್ಕಿ ಹೊಡೆದಿದೆ. ರಸ್ತೆಯ ವಿಭಜಕದಿಂದ ಹಾದು ಹೋಗುವಾಗ ಎರಡು ವಾಹನಗಳ ನಡುವೆ ಡಿಕ್ಕಿಯಾಗಿದೆ. ಆಟೊ ಸಂಪೂರ್ಣ ಜಖಂಗೊಂಡಿದೆ.
ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.