ADVERTISEMENT

ಖಮೇನಿ‌ ಹತ್ಯೆ; ಕಪ್ಪು ಬಟ್ಟೆ ತೊಟ್ಟು ಅಮೆರಿಕಕ್ಕೆ ಧಿಕ್ಕಾರ ಕೂಗಿದ ಅಲೀಪುರ ಜನರು

​ಪ್ರಜಾವಾಣಿ ವಾರ್ತೆ
Published 1 ಮಾರ್ಚ್ 2026, 5:43 IST
Last Updated 1 ಮಾರ್ಚ್ 2026, 5:43 IST
   

ಚಿಕ್ಕಬಳ್ಳಾಪುರ: ಇರಾನ್ ನಾಯಕ ಅಯಾತೊಲ್ಲಾ ಅಲಿ ಖಮೇನಿ‌ ಅವರ ಹತ್ಯೆ ಖಂಡಿಸಿ ಗೌರಿಬಿದನೂರು ತಾಲ್ಲೂಕಿನ ‌ಅಲೀಪುರದಲ್ಲಿ ನಡೆಯುತ್ತಿರುವ ಪ್ರತಿಭಟನಾ ಮೆರವಣಿಗೆಯಲ್ಲಿ ಮುಸ್ಲಿಮರು‌ ಅಮೆರಿಕ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಧಿಕ್ಕಾರದ ಘೋಷಣೆಗಳನ್ನು ಕೂಗಿದರು.

ಕಪ್ಪು ಬಟ್ಟೆ ಧರಿಸಿ, ಕಪ್ಪು ಬಾವುಟ ಹಿಡಿದು ಅಮೆರಿಕ ಮತ್ತು ಇಸ್ರೇಲ್ ವಿರುದ್ಧ ಘೋಷಣೆ ಕೂಗಿದರು.

ಮಸೀದಿ ಬಳಿ ಖಮೇನಿ‌ ಅವರಿಗೆ ಗೌರವ ಸಲ್ಲಿಸಲು ಪ್ರಾರ್ಥನೆ ಸಲ್ಲಿಸಿದರು.‌ ಈ ವೇಳೆ ಹಲವರು ಭಾವುಕರಾಗಿ ಕಣ್ಣೀರಿಟ್ಟರು.

ADVERTISEMENT

ನಂತರ ಗ್ರಾಮದ ಪ್ರಮುಖ ರಸ್ತೆಯಲ್ಲಿ ಮೆರವಣಿಗೆ ಸಾಗಿದರು. ಗ್ರಾಮದ ಎಲ್ಲ ಅಂಗಡಿಗಳು ಬಾಗಿಲು ಮುಚ್ಚಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.