ADVERTISEMENT

ಚಿಕ್ಕಬಳ್ಳಾಪುರ: ಬಿ.ಎನ್.ಬಚ್ಚೇಗೌಡ ಬಿಜೆಪಿ ಅಭ್ಯರ್ಥಿ

​ಪ್ರಜಾವಾಣಿ ವಾರ್ತೆ
Published 25 ಜನವರಿ 2019, 19:23 IST
Last Updated 25 ಜನವರಿ 2019, 19:23 IST
ಹೊಸಕೋಟೆ ಪ್ರವಾಸಿ ಮಂದಿರ ವೃತ್ತದಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರನ್ನು ಮುಖಂಡರಾದ ಬಿ.ಎನ್. ಬಚ್ಚೇಗೌಡ, ಶರತ್ ಕುಮಾರ್ ಗೌಡ ಸ್ವಾಗತಿಸಿದರು
ಹೊಸಕೋಟೆ ಪ್ರವಾಸಿ ಮಂದಿರ ವೃತ್ತದಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರನ್ನು ಮುಖಂಡರಾದ ಬಿ.ಎನ್. ಬಚ್ಚೇಗೌಡ, ಶರತ್ ಕುಮಾರ್ ಗೌಡ ಸ್ವಾಗತಿಸಿದರು   

ಹೊಸಕೋಟೆ: ಲೋಕಸಭಾ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಬಿ.ಎನ್.ಬಚ್ಚೇಗೌಡ ಕಣಕ್ಕೆ ಇಳಿಯಲಿದ್ದಾರೆ ಎಂದು ಪಕ್ಷದ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಹೇಳಿದರು.

ಬರ ಅಧ್ಯಯನಕ್ಕಾಗಿ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗೆ ಹೋಗುವ ಮಾರ್ಗದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕಳೆದ ಬಾರಿ ಕೆಲವೊಂದು ಕಾರಣಗಳಿಂದ ಬಚ್ಚೇಗೌಡರು ಗೆಲ್ಲಲಾಗಲಿಲ್ಲ. ಈ ಬಾರಿ ಹೆಚ್ಚಿನ ಬಹುಮತದಿಂದ ಗೆಲ್ಲಲಿದ್ದಾರೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಲೋಕಸಭಾ ಚುನಾವಣೆ ಬಗ್ಗೆ ಪತ್ರಿಕೆಗಳಲ್ಲಿ ಬಂದ ಸಮೀಕ್ಷೆ ಕುರಿತು ಪ್ರತಿಕ್ರಿಯಿಸಿದ ಅವರು, ‘ನಾನು ಸಮೀಕ್ಷೆಗಳನ್ನು ಒಪ್ಪುವುದಿಲ್ಲ. ರಾಜ್ಯದಲ್ಲಿ ನಮ್ಮ ಪಕ್ಷ ಕನಿಷ್ಠ 20 ಕ್ಷೇತ್ರಗಳಲ್ಲಿ ಜಯಗಳಿಸಲಿದ್ದು ಅದರಲ್ಲಿ ಚಿಕ್ಕಬಳ್ಳಾಪುರ ಕ್ಷೇತ್ರವೂ ಒಂದು’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.