ADVERTISEMENT

ಬಾಗೇಪಲ್ಲಿ: ಗಾಂಜಾ ಮಾರಾಟ ಆರೋಪಿ ಬಂಧನ

​ಪ್ರಜಾವಾಣಿ ವಾರ್ತೆ
Published 10 ಮೇ 2025, 15:29 IST
Last Updated 10 ಮೇ 2025, 15:29 IST
<div class="paragraphs"><p>ಬಂಧನ</p></div>

ಬಂಧನ

   

(ಪ್ರಾತಿನಿಧಿಕ ಚಿತ್ರ)

ಬಾಗೇಪಲ್ಲಿ: ತಾಲ್ಲೂಕಿನಲ್ಲಿ ಗಾಂಜಾ ಮಾರಾಟಕ್ಕೆ ಯತ್ನಿಸಿದ್ದ ಆರೋಪಿಯನ್ನು ಬಂಧಿಸಿ, ಆತನಿಂದ ₹4 ಲಕ್ಷ ಮೌಲ್ಯದ ಒಂಭತ್ತು ಕೆ.ಜಿ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ.

ADVERTISEMENT

ಆಂಧ್ರಪ್ರದೇಶದ ಅರುಣ್‍ಕುಮಾರ್ ಬಂಧಿತ ಆರೋಪಿ.

ತಾಲ್ಲೂಕಿನ ಗೂಳೂರು ನಿಡುಮಾಮಿಡಿ ಮಠದ ಮುಂದೆ ಪೊಲೀಸರ ತಂಡ ಗಸ್ತಿನಲ್ಲಿ ಇರುವಾಗ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ವ್ಯಕ್ತಿಯನ್ನು ಹಿಡಿದು ಬ್ಯಾಗ್‌ ಪರಿಶೀಲಿಸಿದಾಗ ಪರವಾನಗಿ ಇಲ್ಲದೆ 9 ಕೆ. ಜಿ ಗಾಂಜಾ ಇದ್ದುದ್ದನ್ನು ಗಮನಿಸಿ ಪೊಲೀಸರು ಆತನನ್ನು ವಶಕ್ಕೆ ಪಡೆದಿದ್ದಾರೆ.

ವಿಶಾಖಪಟ್ಟಣ ಬಳಿಯ ಅರುಕುವ್ಯಾಲಿ ಎಂಬ ಊರಿನಿಂದ ಗಾಂಜಾ ತಂದು ಬಾಗೇಪಲ್ಲಿ, ಚೇಳೂರು ತಾಲ್ಲೂಕುಗಳಲ್ಲಿ ಸಾರ್ವಜನಿಕರಿಗೆ ಗಾಂಜಾ ಮಾರಾಟ ಮಾಡುತ್ತಿರುವುದಾಗಿ ವಿಚಾರಣೆಯಲ್ಲಿ ಆರೋಪಿ ತಪ್ಪೊಪ್ಪಿಕೊಂಡಿದ್ದಾರೆ.

ಈ ಸಂಬಂಧ ಬಾಗೇಪಲ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.