ಶಾಸಕ ಸುಬ್ಬಾರೆಡ್ಡಿ
ಚಿಕ್ಕಬಳ್ಳಾಪುರ: ಬಾಗೇಪಲ್ಲಿ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಅವರ ಕರೆ ಸ್ವೀಕರಿಸದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಬಿಂದುಮಣಿ ಎಂ.ಎಲ್.ಅವರನ್ನು ಕೆಲಸದಿಂದ ಅಮಾನತುಗೊಳಿಸಲಾಗಿದೆ.
ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಕಾರ್ಯಕ್ರಮಗಳ ಬಗ್ಗೆ ಮಾತನಾಡಲು ಬಿಂದುಮಣಿ ಅವರಿಗೆ ಶಾಸಕರು ಮೂರು ದಿನ ಕರೆ ಮಾಡಿದ್ದಾರೆ. ಆದರೆ ಅಧಿಕಾರಿ ಕರೆ ಸ್ವೀಕರಿಸಿಲ್ಲ. ಇದರಿಂದ ಅಸಮಾಧಾನಗೊಂಡ ಶಾಸಕರು ಬಿಂದುಮಣಿ ವಿರುದ್ಧ ಶಿಸ್ತು ಕ್ರಮಕೈಗೊಳ್ಳಬೇಕು ಎಂದು ಇಲಾಖೆಯನ್ನು ಕೋರಿದ್ದರು.
‘ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸದೆ, ಸರ್ಕಾರಿ ಅಧಿಕಾರಿಗೆ ತರವಲ್ಲದ ರೀತಿಯಲ್ಲಿ ವರ್ತಿಸಿದ್ದಾರೆ. ಬೇಜವಾಬ್ದಾರಿ ತೋರಿದ್ದಾರೆ. ಆದ್ದರಿಂದ ಇವರನ್ನು ಅಮಾನತುಗೊಳಿಸುವಂತೆ’ ಅಲ್ಪಸಂಖ್ಯಾತ ನಿರ್ದೇಶನಾಲಯದ ನಿರ್ದೇಶಕರು, ಇಲಾಖೆಯ ಅಧೀನ ಕಾರ್ಯದರ್ಶಿಗೆ ಪ್ರಸ್ತಾವ ಸಹ ಸಲ್ಲಿಸಿದ್ದರು.
ಈ ಪ್ರಸ್ತಾವ ಆಧರಿಸಿ, ‘ಬಿಂದುಮಣಿ ಅವರನ್ನು ಇಲಾಖೆ ವಿಚಾರಣೆ ಕಾಯ್ದಿರಿಸಿ ಕೆಲಸದಿಂದ ಅಮಾನುಗೊಳಿಸಲಾಗಿದೆ’ ಎಂದು ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಅಧೀನ ಕಾರ್ಯದರ್ಶಿ ಆದೇಶಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.