ADVERTISEMENT

ಯಲ್ಲಂಪಲ್ಲಿ ಕೊಲೆ ಪ್ರಕರಣ: ಮೂವರಿಗೆ ಜೀವಾವಧಿ ಶಿಕ್ಷೆ

​ಪ್ರಜಾವಾಣಿ ವಾರ್ತೆ
Published 27 ಫೆಬ್ರುವರಿ 2026, 7:12 IST
Last Updated 27 ಫೆಬ್ರುವರಿ 2026, 7:12 IST
<div class="paragraphs"><p>ಜೈಲು (ಪ್ರಾತಿನಿಧಿಕ ಚಿತ್ರ)</p></div>

ಜೈಲು (ಪ್ರಾತಿನಿಧಿಕ ಚಿತ್ರ)

   

ಬಾಗೇಪಲ್ಲಿ: ತಾಲ್ಲೂಕಿನ ಯಲ್ಲಂಪಲ್ಲಿ ಗ್ರಾಮದ ನಿವಾಸಿ ಗಜೇಂದ್ರ ಅವರನ್ನು ಮಾರಕಾಸ್ತ್ರಗಳಿಂದ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಮೂವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಮತ್ತು ₹25 ಸಾವಿರ ವಿಧಿಸಲಾಗಿದೆ. 

ಪ್ರಕರಣದ ಸಾಕ್ಷಿದಾರರನ್ನು ವಿಚಾರಣೆ ಮಾಡಿದ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಎಸ್. ಶ್ರೀಧರ್ ಅವರು, ಅಪರಾಧಿಗಳಾದ ಸುರೇಂದ್ರಬಾಬು, ಶ್ರೀನಾಥ ಮತ್ತು ವೆಂಕಟೇಶ್ ಅವರಿಗೆ ಜೀವಾವಧಿ ಶಿಕ್ಷೆ ಮತ್ತು ₹25 ಸಾವಿರ ದಂಡ ವಿಧಿಸಿ ಇದೇ 19ರಂದು ತೀರ್ಪು ಪ್ರಕಟಿಸಿದ್ದರು. 

ADVERTISEMENT

ಪ್ರಕರಣದ ಹಿನ್ನಲೆ: ತಾಲ್ಲೂಕಿನ ಯಲ್ಲಂಪಲ್ಲಿ ಗ್ರಾಮದಲ್ಲಿ 2023ರ ಡಿಸೆಂಬರ್ 6ರಂದು ಗಜೇಂದ್ರ ಎಂಬುವರ ಮೇಲೆ ಮಾರಕಾಸ್ತ್ರಗಳಿಂದ ದಾಳಿ ಮಾಡಿ ಕೊಲೆ ಮಾಡಲಾಗಿತ್ತು. ಈ ಸಂಬಂಧ ಗಜೇಂದ್ರ ಅವರ ತಾಯಿ ವರಲಕ್ಷ್ಮಮ್ಮ 2023ರ ಡಿ.7ರಂದು ಬಾಗೇಪಲ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಕಾರ್ಯಾಚರಣೆ ಕೈಗೊಂಡ ಪೊಲೀಸರು, ಯಲ್ಲಂಪಲ್ಲಿ ಗ್ರಾಮದ ಸುರೇಂದ್ರಬಾಬು, ಶ್ರೀನಾಥ ಮತ್ತು ವೆಂಕಟೇಶ್ ಅವರನ್ನು ಬಂಧಿಸಿದ್ದರು. ಈ ಮೂವರ ವಿರುದ್ಧ ದೋಷಾರೋಪವನ್ನು ಪಟ್ಟಿಯನ್ನು ಪೊಲೀಸರು ನ್ಯಾಯಾಲಯಕ್ಕೆ ಸಲ್ಲಿಸಿದ್ದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.