ADVERTISEMENT

ಆರೋಪ ಸಾಬೀತಾದರೆ ಎಸ್‌ಡಿಪಿಐ ನಿಷೇಧಿಸಿ: ಶಾಸಕ ಡಾ.ಕೆ.ಸುಧಾಕರ್

​ಪ್ರಜಾವಾಣಿ ವಾರ್ತೆ
Published 17 ಜನವರಿ 2020, 14:13 IST
Last Updated 17 ಜನವರಿ 2020, 14:13 IST
ಡಾ.ಕೆ.ಸುಧಾಕರ್
ಡಾ.ಕೆ.ಸುಧಾಕರ್   

ಚಿಕ್ಕಬಳ್ಳಾಪುರ: ‘ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಪರ ಜನಜಾಗೃತಿ ಸಮಾವೇಶದಲ್ಲಿ ಎಸ್‌ಡಿಪಿಐ ಕಾರ್ಯಕರ್ತರು ಮುಖಂಡರ ಕೊಲೆಗೆ ಸಂಚು ರೂಪಿಸಿದ್ದರು ಎಂಬುದು ಆಘಾತಕಾರಿ ವಿಚಾರ. ಈ ಕುರಿತು ರಾಜ್ಯ ಸರ್ಕಾರ ತನಿಖೆ ನಡೆಸಬೇಕು. ತನಿಖೆಯಲ್ಲಿ ಆರೋಪ ಸಾಬೀತಾದರೆ ಎಸ್‌ಡಿಪಿಐ ಸಂಘಟನೆಯನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ ನಿಷೇಧಿಸಬೇಕು’ ಎಂದು ಶಾಸಕ ಡಾ.ಕೆ.ಸುಧಾಕರ್ ಹೇಳಿದರು.

ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕೆಲ ವಾದಗಳನ್ನು ಕೆಲವರು ಒಪ್ಪುವುದಿಲ್ಲ. ಹಾಗೆಂದು ಕಾನೂನು ಕೈಗೆತ್ತಿಕೊಂಡು ಮತ್ತೊಬ್ಬರ ಪ್ರಾಣಹಾನಿ ಮಾಡುವ ಆಲೋಚನೆ ಮಾಡಿ ಆತಂಕದ ವಾತಾವರಣ ನಿರ್ಮಾಣ ಮಾಡುತ್ತಿದ್ದಾರೆ. ಇದಕ್ಕೆ ಕಡಿವಾಣ ಹಾಕದಿದ್ದರೆ ಶಾಂತಿಯ ತೋಟದಂತಿರುವ ರಾಜ್ಯದಲ್ಲಿ ವಿಕೃತ ಮನಸ್ಸಿನವರು ಕ್ರೌರ್ಯ ಮೆರೆಯುತ್ತಾರೆ’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT