ಚಿಂತಾಮಣಿ: ಆಲಂಬಗಿರಿ ಆಂಜನೇಯಸ್ವಾಮಿ ದೇವಾಲಯದಲ್ಲಿ ಹನುಮ ಜಯಂತಿ ಪ್ರಯುಕ್ತ ಭಾನುವಾರ ಆಂಜನೇಯಸ್ವಾಮಿಗೆ ವೀಳ್ಯದೆಲೆ ಹಾಗೂ ವಿವಿಧ ಹೂಗಳಿಂದ ಅಲಂಕಾರ ಮಾಡಲಾಗಿತ್ತು.
ದೇವಾಲಯವನ್ನು ವಿದ್ಯುತ್ ದೀಪಗಳಿಂದ ಲಂಕಾರ ಮಾಡಲಾಗಿತ್ತು. ಬೆಳಿಗ್ಗೆಯಿಂದ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನೆರವೇರಿದವು. ಅಷ್ಟೋತ್ತರ ಸಹಿತ ಅಷ್ಟಾವಧಾನ ಸೇವೆಯನ್ನು ಸಲ್ಲಿಸಿ ಮಹಾ ಮಂಗಳಾರತಿ ಮಾಡಲಾಯಿತು. ಹನುಮಜಯಂತಿ ಪ್ರಯುಕ್ತ ಸುತ್ತಮುತ್ತಲ ಗ್ರಾಮಗಳು ಹಾಗೂ ದೂರದಿಂದ ಬಂದ ಭಕ್ತರು ದೇವಾಲಯದಲ್ಲಿ ಹಣ್ಣು ಕಾಯಿ ನೀಡಿ ಪೂಜೆ ಸಲ್ಲಿಸಿದರು.
ಗ್ರಾಮಸ್ಥರಿಂದ ಸಂಕೀರ್ತನೆ ಏರ್ಪಡಿಸಲಾಗಿತ್ತು. ಸಾವಿರಾರು ಭಕ್ತರು ಆಗಮಿಸಿ ರಾಮದೂತನ ದರ್ಶನ ಪಡೆದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.