ADVERTISEMENT

ಚಿಕ್ಕಬಳ್ಳಾಪುರ: ಪಂಜಿನ ಮೆರವಣಿಗೆ, ಹೂ ಸುರಿದು ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 27 ಸೆಪ್ಟೆಂಬರ್ 2021, 4:45 IST
Last Updated 27 ಸೆಪ್ಟೆಂಬರ್ 2021, 4:45 IST
   

ಚಿಕ್ಕಬಳ್ಳಾಪುರ: ಕೃಷಿ ಕಾಯ್ದೆ ವಿರೋಧಿಸಿ ರೈತ, ಕಾರ್ಮಿಕ ಸಂಘಟನೆಗಳು ಕರೆ ನೀಡಿರುವ ಭಾರತ್ ಬಂದ್ ಬೆಂಬಲಿಸಿ ಕರ್ನಾಟಕ ರಕ್ಷಣಾ ವೇದಿಕೆ, ರೈತ ಸಂಘದ ಕಾರ್ಯಕರ್ತರು ನಗರದಲ್ಲಿ ಬೆಳಿಗ್ಗೆಯೇ ಪಂಜಿನ ಮೆರವಣಿಗೆ ನಡೆಸಿದರು. ಶಿಡ್ಲಘಟ್ಟ ವೃತ್ತದಲ್ಲಿ ಹೂ ಸುರಿದು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ನಗರದಲ್ಲಿ ಜನ ಜೀವನ ಸಾಮಾನ್ಯ ಸ್ಥಿತಿಯಲ್ಲಿ ಇದೆ. ಕೆಲವು ಅಂಗಡಿಗಳು ಬಾಗಿಲು ತೆರೆದಿವೆ. ಬಲಮುರಿ ವೃತ್ತದ ಬಳಿಯ ತರಕಾರಿ ಮಾರುಕಟ್ಟೆಯಲ್ಲಿ ಎಲ್ಲ ಅಂಗಡಿಗಳು ಬಾಗಿಲು ತೆರೆದಿವೆ.

ಶಿಡ್ಲಘಟ್ಟ ವೃತ್ತದಲ್ಲಿ 11ರ ವೇಳೆಗೆ ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸುವರು.

ADVERTISEMENT

ಸಂಘಟನೆ, ಪಕ್ಷಗಳ ಪ್ರತ್ಯೇಕ ಪ್ರತಿಭಟನೆ

ಚಿಕ್ಕಬಳ್ಳಾಪುರ: ಬಂದ್ ಪ್ರಯುಕ್ತ ವಿವಿಧ ಸಂಘಟನೆಗಳು ನಗರದಲ್ಲಿ ಪ್ರತ್ಯೇಕವಾಗಿ ಪ್ರತಿಭಟನೆ ನಡೆಸುತ್ತಿವೆ.

ರೈತ ಸಂಘದ ಕಾರ್ಯಕರ್ತರ ಪ್ರತಿಭಟನೆ ನಂತರ ಶಿಡ್ಲಘಟ್ಟ ವೃತ್ತದಿಂದ ಸಿಐಟಿಯು ಹಾಗೂ ಸಿಪಿಎಂ ಕಾರ್ಯಕರ್ತರು ಬೈಕ್ ರ್ಯಾಲಿ ಆರಂಭಿಸಿದರು.

ಇದೇ ವೃತ್ತದಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ಸಹ ಪ್ರತ್ಯೇಕವಾಗಿ ಪ್ರತಿಭಟನೆ ನಡೆಸಲಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.