ADVERTISEMENT

ಚೇಳೂರು: ಕಾಲ್ನಡಿಗೆಯಲ್ಲಿ ಸಂಚರಿಸಿದ ಶಾಸಕ

₹ 40 ಲಕ್ಷ ವೆಚ್ಚದ ಕಾಮಗಾರಿಗೆ ಭೂಮಿ ಪೂಜೆ

​ಪ್ರಜಾವಾಣಿ ವಾರ್ತೆ
Published 26 ಅಕ್ಟೋಬರ್ 2024, 15:56 IST
Last Updated 26 ಅಕ್ಟೋಬರ್ 2024, 15:56 IST
ಚೇಳೂರು ಪಟ್ಟಣದ ವಿವಿಧ ಬಡಾವಣೆಗಳಿಗೆ ಕಾಲ್ನಡಿಗೆಯಲ್ಲಿ ಸಂಚರಿಸಿದ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ
ಚೇಳೂರು ಪಟ್ಟಣದ ವಿವಿಧ ಬಡಾವಣೆಗಳಿಗೆ ಕಾಲ್ನಡಿಗೆಯಲ್ಲಿ ಸಂಚರಿಸಿದ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ   

ಚೇಳೂರು: ಪಟ್ಟಣದಲ್ಲಿ ನೈರ್ಮಲ್ಯ ಕಾಪಾಡಲು ಸಿಸಿ ರಸ್ತೆ ಮತ್ತು ಚರಂಡಿ ನಿರ್ಮಾಣ ಅಗತ್ಯವಾಗಿದ್ದು, ಗುಣಮಟ್ಟದ ಕಾಮಗಾರಿ ನಡೆಸಬೇಕು ಎಂದು ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಹೇಳಿದರು.

ಪಟ್ಟಣದ ಅಲ್ಪ ಸಂಖ್ಯಾತರ ಕಾಲೋನಿಯಲ್ಲಿ ಶುಕ್ರವಾರ ಸಂಜೆ ಸುಮಾರು ₹ 40 ಲಕ್ಷ ವೆಚ್ಚದಲ್ಲಿ ಸಿ.ಸಿ. ರಸ್ತೆ ಮತ್ತು ಚರಂಡಿ ಕಾಮಗಾರಿಗೆ ಗುದ್ದಲಿ ಪೂಜೆ ಮಾಡಿ ಮಾತನಾಡಿದರು.

ಇಲ್ಲಿನ ಚರಂಡಿ ಸಿಸಿ ರಸ್ತೆಗಳ ಕುರಿತು ಅನೇಕ ದೂರುಗಳು ಬಂದಿದ್ದು, ನೈರ್ಮಲ್ಯ ಕಾಪಾಡಲು ಸಿಸಿ ರಸ್ತೆ ಮತ್ತು ಚರಂಡಿ ನಿರ್ಮಾಣ ಅಗತ್ಯವಾಗಿವೆ. ಪಟ್ಟಣದ ಶಾಂತಿ ನಗರ, ಗ್ರಾಮ ಪಂಚಾಬಗತಿ ರಸ್ತೆ, ಚರಂಡಿ ನರ್ಮಾಣ ಹಾಗೂ ಬಂಗ್ಲಾ ಬಜಾರ್ ನಲ್ಲಿ ಮೋರಿ ನಿರ್ಮಾಣಕ್ಕೆ ಭೂಮಿ ಪೂಜೆ ಮಾಡುವುದಾಗಿ ತಿಳಿಸಿದರು.

ADVERTISEMENT

ಮುಂದಿನ ದಿನಗಳಲ್ಲಿ ಶೇರ್‌ಖಾನ್ ಕೋಟೆ ಹಾಗೂ ಹೊಸಹುಡ್ಯ ಗ್ರಾಮದಲ್ಲಿ ಚರಂಡಿ ಹಾಗೂ ಸಿಸಿ ರಸ್ತೆ ಕಾಮಗಾರಿಗಳಿಗೆ ಆದ್ಯತೆ ನೀಡಲಾಗುವುದು ಎಂದು ಭರವಸೆ ನೀಡಿದರು.

ಗುಣಮಟ್ಟಕ್ಕೆ ಆದ್ಯತೆ: ಗುಣಮಟ್ಟದ ಕಾಮಗಾರಿ ಮಾಡುವ ಮೂಲಕ ದೀರ್ಘ ಕಾಲ ಬಾಳಿಕೆ ಬರುವಂತಪ ಕೆಲಸ ಮಾಡಬೇಕು ಎಂದು ಅವರು ಅಧಿಕಾರಿಗಳಿಗೆ ಮತ್ತು ಗುತ್ತಿಗೆದಾರರಿಗೆ ಸೂಚಿಸಿದರು. 

ವಿವಿಧ ಬಡಾವಣೆಗಳಿಗೆ ಕಾಲ್ನಡಿಗೆಯಲ್ಲಿಯೇ ಬಂದ ಶಾಸಕ, ಚೇಳೂರು ಪಟ್ಟಣದ ಗ್ರಾಮ ಪಂಚಾಯತಿ ರಸ್ತೆ ಹಾಗೂ ಶಾಂತಿ ನಗರದ ವಿವಿಧ ಬಡಾವಣೆಗಳನ್ನು ಪರಿಶೀಲಿಸಿದರು. ತಹಶೀಲ್ದಾರ್ ಶ್ರೀನಿವಾಸಲು ನಾಯುಡು, ಪಿಡಿಒ ಕೆ. ವೆಂಕಟಾಚಲಪತಿ ಸೇರಿದಂತೆ ತಾಲ್ಲೂಕಿನ ವಿವಿಧ ಅಧಿಕಾರಿಗಳು ಹಾಗೂ ಕಾಂಗ್ರೆಸ್ ಮುಖಂಡರು ಇದ್ದರು.

ಚೇಳೂರು ಪಟ್ಟಣದ ವಿವಿಧ ಬಡಾವಣೆಗಳಿಗೆ ಕಾಲ್ನಡಿಗೆಯಲ್ಲಿ ಬಂದ ಶಾಸಕ :ಎಸ್ ಎನ್ ಸುಬ್ಬಾರೆಡ್ಡಿ
ಶಾಸಕ ಎಸ್ ಎನ್ ಸುಬ್ಬಾರೆಡ್ಡಿ ರವರಿಂದ ಚೇಳೂರು ಪಟ್ಟಣದಲ್ಲಿ 40 ಲಕ್ಷ ರೂ ವೆಚ್ಚದ ವಿವಿಧ ಕಾಮಗಾರಿಕೆಗೆ ಭೂಮಿ ಪೂಜೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.