ADVERTISEMENT

ನ.3 ರಂದು ಚಿಕ್ಕಬಳ್ಳಾಪುರದಲ್ಲಿ ಭೋವಿ ಸಮಾವೇಶ

ಸಮಾವೇಶದಲ್ಲಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಭಾಗಿ

​ಪ್ರಜಾವಾಣಿ ವಾರ್ತೆ
Published 1 ನವೆಂಬರ್ 2019, 15:35 IST
Last Updated 1 ನವೆಂಬರ್ 2019, 15:35 IST
ಚಿಕ್ಕಬಳ್ಳಾಪುರದಲ್ಲಿ ಶುಕ್ರವಾರ ಶಾಸಕ ಎಂ.ಚಂದ್ರಪ್ಪ ಅವರು ಕಾರ್ಯಕ್ರಮದ ಸಿದ್ಧತೆ ಕಾರ್ಯಗಳನ್ನು ಪರಿಶೀಲಿಸಿದರು.
ಚಿಕ್ಕಬಳ್ಳಾಪುರದಲ್ಲಿ ಶುಕ್ರವಾರ ಶಾಸಕ ಎಂ.ಚಂದ್ರಪ್ಪ ಅವರು ಕಾರ್ಯಕ್ರಮದ ಸಿದ್ಧತೆ ಕಾರ್ಯಗಳನ್ನು ಪರಿಶೀಲಿಸಿದರು.   

ಚಿಕ್ಕಬಳ್ಳಾಪುರ: ನಗರದಲ್ಲಿ ಭಾನುವಾರ (ನ.3) ಭೋವಿ ಸಮುದಾಯದ ರಾಜ್ಯ ಮಟ್ಟದ ಸಮಾವೇಶ ಮತ್ತು ಶಿವಯೋಗಿ ಸಿದ್ದರಾಮೇಶ್ವರ ಜಯಂತಿ ಆಯೋಜಿಸಲಾಗಿದೆ. ಸಮಾವೇಶವನ್ನು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಉದ್ಘಾಟಿಸಲಿದ್ದಾರೆ.

ಸಮಾವೇಶಕ್ಕಾಗಿ ನಗರದ ಜೂನಿಯರ್ ಕಾಲೇಜು ಆವರಣದಲ್ಲಿ ಬೃಹತ್ ಶಾಮಿಯಾನ ಹಾಕುವ, ನಂದಿ ರಂಗಮಂದಿರ ಸಜ್ಜುಗೊಳಿಸುವ ಕೆಲಸ ಭರದಿಂದ ಸಾಗಿದೆ.

ಶುಕ್ರವಾರ ಸಿದ್ಧತೆಗಳನ್ನು ಪರಿಶೀಲಿಸಿದ ಹೊಳಲ್ಕೆರೆ ಶಾಸಕ ಎಂ.ಚಂದ್ರಪ್ಪ ಅವರು, ‘ಸಮಾವೇಶಕ್ಕೆ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ನಗರ ಮತ್ತು ಗ್ರಾಮಾಂತರ, ತುಮಕೂರು, ಚಿತ್ರದುರ್ಗ ಜಿಲ್ಲೆಗಳಿಂದ ಸುಮಾರು ಒಂದು ಲಕ್ಷಕ್ಕೂ ಅಧಿಕ ಸಂಖ್ಯೆಯಲ್ಲಿ ಭೋವಿ ಸಮಾಜದ ಮುಖಂಡರು, ಕಾರ್ಯಕರ್ತರು ಭಾಗವಹಿಸಲಿದ್ದಾರೆ’ ಎಂದು ಹೇಳಿದರು.

ADVERTISEMENT

‘ಅನಿವಾರ್ಯ ಕಾರಣಗಳಿಂದ ಈ ಸರ್ಕಾರದಲ್ಲಿ ಭೋವಿ ಸಮಾಜದವರಿಗೆ ಸಚಿವ ಸ್ಥಾನ ಸಿಗಲಿಲ್ಲ. ಬಿಜೆಪಿ ಸ್ವಂತ ಬಲದಿಂದ ಅಧಿಕಾರ ನಡೆಸಿದ್ದರೆ ಭೋವಿ ಸಮಾಜದ ಶಾಸಕರಿಗೆ ಸಚಿವ ಸ್ಥಾನ ಸಿಗುತ್ತಿತ್ತು. ಮುಂದೆ ಯಡಿಯೂರಪ್ಪ ಅವರು ನಮ್ಮ ಸಮುದಾಯದ ಶಾಸಕರನ್ನು ಕೈ ಹಿಡಿಯುವ ಭರವಸೆ ಇದೆ’ ಎಂದರು. ಈ ಸಂದರ್ಭದಲ್ಲಿ ಮಾಜಿ ಶಾಸಕ ವೆಂಕಟಸ್ವಾಮಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.