
ಪ್ರಜಾವಾಣಿ ವಾರ್ತೆ
ಚಿಕ್ಕಬಳ್ಳಾಪುರ: ತಾಲ್ಲೂಕಿನ ಅಜ್ಜವಾರ ಗೇಟ್ ಬಳಿ ಗುರುವಾರ ರಾತ್ರಿ ಸಂಭವಿಸಿದ ಅಪಘಾತದಲ್ಲಿ ನಾಲ್ಕು ಮಂದಿ ಮೃತಪಟ್ಟಿದ್ದಾರೆ.
ಮನೋಜ್, ನರಸಿಂಹ ಮೂರ್ತಿ, ಅರುಣ್, ನಂದೀಶ್ ಮೃತರು.
ಈ ನಾಲ್ಕೂ ಮಂದಿ ಕೃಷಿ ಕೂಲಿ ಕಾರ್ಮಿಕರಾಗಿದ್ದರು.
ಒಂದೇ ಬೈಕ್ ನಲ್ಲಿ ಚಿಕ್ಕಬಳ್ಳಾಪುರದಿಂದ ಬೈಕ್ ನಲ್ಲಿ ಅಜ್ಜವಾರಕ್ಕೆ ತೆರಳುತ್ತಿದ್ದರು. ಅಜ್ಜವಾರ ಗೇಟ್ ಬಳಿ ಬೈಕ್ ಗೆ ಟಿಪ್ಪರ್ ಡಿಕ್ಕಿಯಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.