ADVERTISEMENT

ಬೈಕ್‌ ಅಪಘಾತ: ಪ್ರಭಾರಿ ಕಂದಾಯ ನಿರೀಕ್ಷಕ ಸಾವು

​ಪ್ರಜಾವಾಣಿ ವಾರ್ತೆ
Published 4 ಜೂನ್ 2025, 16:19 IST
Last Updated 4 ಜೂನ್ 2025, 16:19 IST
ರಮೇಶ್
ರಮೇಶ್   

ಚಿಂತಾಮಣಿ: ತಾಲ್ಲೂಕಿನ ಮುರುಗಮಲ್ಲ ಹೋಬಳಿಯ ಪೆದ್ದೂರು ಕಂದಾಯ ವೃತ್ತದ ಗ್ರಾಮ ಆಡಳಿತಾಧಿಕಾರಿ ಹಾಗೂ ಹೋಬಳಿಯ ಪ್ರಬಾರಿ ಕಂದಾಯ ನಿರೀಕ್ಷಕ ರಮೇಶ್ (28) ಮಂಗಳವಾರ ರಾತ್ರಿ ಶಿಡ್ಲಘಟ್ಟ ತಾಲ್ಲೂಕಿನ ಮೇಲೂರು ಬಳಿ ನಡೆದ ದ್ವಿಚಕ್ರ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಮಂಗಳವಾರ ಕೆಲಸ ಮುಗಿಸಿಕೊಂಡು ಸ್ನೇಹಿತನ ಜತೆ ದ್ವಿಚಕ್ರವಾಹನದಲ್ಲಿ ಶಿಡ್ಲಘಟ್ಟ ಮಾರ್ಗವಾಗಿ ವಿಜಯಪುರಕ್ಕೆ ಹೋಗುತ್ತಿದ್ದರು. ವೇಗವಾಗಿ ಹೋಗುತ್ತಿದ್ದ ಬೈಕ್ ಮೇಲೂರು ಬಳಿ ರಸ್ತೆಯ ಉಬ್ಬಿನ ಮೇಲೆ ತೆರಳಿದಾಗ ಹಿಂಬದಿ ಕುಳಿತಿದ್ದ ರಮೇಶ್ ಕೆಳಗೆ ಬಿದ್ದು ಗಾಯಗೊಂಡಿದ್ದರು. ಶಿಡ್ಲಘಟ್ಟದ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಮುದ್ದೇನಹಳ್ಳಿಯ ಸತ್ಯಸಾಯಿ ಆಸ್ಪತ್ರೆಗೆ ಕಳುಹಿಸಿದ್ದಾರೆ.

ಆಸ್ಪತ್ರೆಗೆ ಸೇರುವ ಮುನ್ನವೇ ಮೃತಪಟ್ಟಿದ್ದಾರೆ. ವಿಷಯ ಗೊತ್ತಾದ ಕೂಡಲೇ ತಹಶೀಲ್ದಾರ್ ಸುದರ್ಶನ ಯಾದವ್ ಹಾಗೂ ಇತರೆ ಕಂದಾಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಕುಟುಂಬದವರಿಗೆ ಸಾಂತ್ವನ ಹೇಳಿ, ಅಗತ್ಯವಾದ ಸಹಾಯ ಸಹಕಾರ ನೀಡಿದ್ದಾರೆ ಎಂದು ಕಂದಾಯ ಇಲಾಖೆ ಮೂಲಗಳು ತಿಳಿಸಿವೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.