ADVERTISEMENT

ಬೈಕ್‌ಗೆ ಕಾರು ಡಿಕ್ಕಿ: ಸವಾರರು ಸಾವು

​ಪ್ರಜಾವಾಣಿ ವಾರ್ತೆ
Published 8 ಜೂನ್ 2025, 15:46 IST
Last Updated 8 ಜೂನ್ 2025, 15:46 IST
ಬೈಕ್‌ಗೆ ಕಾರು ಡಿಕ್ಕಿಯಾಗಿರುವುದು 
ಬೈಕ್‌ಗೆ ಕಾರು ಡಿಕ್ಕಿಯಾಗಿರುವುದು    

ಗುಡಿಬಂಡೆ: ದ್ವಿಚಕ್ರ ವಾಹನ ಹಾಗೂ ಕಾರಿನ ನಡುವೆ ಭಾನುವಾರ ಸಂಭವಿಸಿದ ರಸ್ತೆ ಅಪಘಾತದಲ್ಲಿ ಇಬ್ಬರು ಸವಾರರು ಮೃತಪಟ್ಟಿದ್ದಾರೆ.

ಗುಡಿಬಂಡೆ ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿ 44ರ ತಟ್ಟಹಳ್ಳಿ ಕ್ರಾಸ್ ಕೋಮಲ್ ಗಾರ್ಡನ್ ಹೋಟೆಲ್ ಮುಂದೆ ಅಪಘಾತ ನಡೆದಿದೆ. ಬೈಕ್‌ನಲ್ಲಿದ್ದ ಯರ್ರಲಕ್ಕೇನಹಳ್ಳಿ ಗ್ರಾಮದ ಶಿವಪ್ಪ (35) ಹಾಗೂ ಅನಿಲ್ ಕುಮಾರ್ (26) ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಟೊಮೆಟೊ ಗಿಡಗಳಿಗೆ ಔಷಧಿ ತರಲು ತಮ್ಮ ಗ್ರಾಮದಿಂದ ಬೈಕ್‌ನಲ್ಲಿ ಬಾಗೇಪಲ್ಲಿ ಕಡೆಗೆ ಹೋಗುತ್ತಿದ್ದಾಗ ಬೈಕ್‌ನ ಹಿಂಬದಿ​ಗೆ ಕಾರು ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಒಬ್ಬರು ರಸ್ತೆ ಪಕ್ಕದಲ್ಲಿ ಬಿದ್ದಿದ್ದಾರೆ. ಮತ್ತೊಬ್ಬರು ಸುಮಾರು 100ಮೀಟರ್‌ ದೂರದಲ್ಲಿ ಬಿದ್ದಿದ್ದಾರೆ. ಕಾರಿನ ಚಾಲಕ ಕಾರನ್ನು ಬಿಟ್ಟು ಪರಾರಿಯಾಗಿದ್ದಾನೆ.

ADVERTISEMENT

ಅಪಘಾತ ನಡೆದ ಸ್ಥಳಕ್ಕೆ ಗುಡಿಬಂಡೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.