ಚಿಂತಾಮಣಿ: ತಾಲ್ಲೂಕಿನ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನಾಯಿಂದ್ರಹಳ್ಳಿ ಗೇಟ್ ಬಳಿ ಶುಕ್ರವಾರ ಬೈಕ್‌ಗೆ ಕಾರು ಡಿಕ್ಕಿ ಹೊಡೆದು ಬೈಕ್ ಸವಾರನ ಕಾಲು ತುಂಡಾಗಿದೆ.
ಆಂಧ್ರಪ್ರದೇಶದ ಮಲಕಲಚೆರವು ಗ್ರಾಮದ ಮಹೇಶ್ ಕಾಲು ಮುರಿದುಕೊಂಡಿರುವ ವ್ಯಕ್ತಿ. ಅವರು ತನ್ನ ಬೈಕ್‌ನಲ್ಲಿ ಬೆಂಗಳೂರು ಕಡೆ ಹೋಗುತ್ತಿದ್ದಾಗ ಚಿಂತಾಮಣಿ–ಬೆಂಗಳೂರು ರಸ್ತೆಯ ನಾಯಿಂದ್ರಹಳ್ಳಿ ಗೇಟ್ ಬಳಿ ಎದುರುಗಡೆಯಿಂದ ಬಂದ ಕಾರು ಡಿಕ್ಕಿ ಹೊಡೆದಿದೆ.
ಕೂಡಲೇ ಸ್ಥಳೀಯರು ಗಾಯಾಳು ಮಹೇಶ್‌ನನ್ನು ಚಿಕಿತ್ಸೆಗೆ ಬೆಂಗಳೂರಿಗೆ ಕಳುಹಿಸಿಕೊಟ್ಟಿದ್ದಾರೆ. ಗ್ರಾಮಾಂತರ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.