ADVERTISEMENT

ಚಿಕ್ಕಬಳ್ಳಾಪುರ | ಮತದಾನ ಜಾಗೃತಿಗೆ ಬೈಕ್ ರ‍್ಯಾಲಿ

​ಪ್ರಜಾವಾಣಿ ವಾರ್ತೆ
Published 7 ಏಪ್ರಿಲ್ 2023, 6:00 IST
Last Updated 7 ಏಪ್ರಿಲ್ 2023, 6:00 IST
ಚಿಕ್ಕಬಳ್ಳಾಪುರ ತಾಲ್ಲೂಕಿನ ಮಂಚನಬಲೆ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಆರು ಗ್ರಾಮ ಪಂಚಾಯಿತಿಗಳಲ್ಲಿ ಮತದಾನಕ್ಕೆ ಸಂಬಂಧಿಸಿದಂತೆ ಬೈಕ್ ರ‍್ಯಾಲಿ ನಡೆಯಿತು
ಚಿಕ್ಕಬಳ್ಳಾಪುರ ತಾಲ್ಲೂಕಿನ ಮಂಚನಬಲೆ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಆರು ಗ್ರಾಮ ಪಂಚಾಯಿತಿಗಳಲ್ಲಿ ಮತದಾನಕ್ಕೆ ಸಂಬಂಧಿಸಿದಂತೆ ಬೈಕ್ ರ‍್ಯಾಲಿ ನಡೆಯಿತು   

ಚಿಕ್ಕಬಳ್ಳಾಪುರ: ತಾಲ್ಲೂಕಿನ ಮಂಚನಬಲೆ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಆರು ಗ್ರಾಮ ಪಂಚಾಯಿತಿಗಳಲ್ಲಿ ಗುರುವಾರ ಮತದಾನಕ್ಕೆ ಸಂಬಂಧಿಸಿದಂತೆ ತಾಲ್ಲೂಕು ಸ್ವೀಪ್ ಸಮಿತಿಯಿಂದ ಬೈಕ್ ರ‍್ಯಾಲಿ ನಡೆಯಿತು.

ಮಂಚನಬಲೆ ಗ್ರಾಮ ಪಂಚಾಯಿತಿಯಿಂದ ಪ್ರಾರಂಭಗೊಂಡ ರ‍್ಯಾಲಿ ದಿಬ್ಬೂರು, ಅಂಗರೇಖನಹಳ್ಳಿ, ಹೊಸಹುಡ್ಯ, ಅಜ್ಜವಾರ ಮೂಲಕ ಪಟ್ರೇನಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಪೂರ್ಣಗೊಂಡಿತು. ಅಣಕನೂರು ಗ್ರಾಮದಲ್ಲಿ ಮಾನವ ಸರಪಳಿ ರಚಿಸಿ ಮತದಾನದ ಪ್ರತಿಜ್ಞಾ ವಿಧಿ ಬೋಧಿಸಲಾಯಿತು.

ತಾಲ್ಲೂಕು ಸ್ವೀಪ್ ಸಮಿತಿ ಅಧ್ಯಕ್ಷ ಹಾಗೂ ತಾ.ಪಂ ಕಾರ್ಯನಿರ್ವಹಣಾಧಿಕಾರಿ ಜಿ.ಆರ್. ಮಂಜುನಾಥ್ ಮಾತನಾಡಿ, ಪ್ರಜಾಪ್ರಭುತ್ವ ವ್ಯವಸ್ಥೆ ಯಲ್ಲಿ ಎಲ್ಲರೂ ಮತದಾನ ಮಾಡಬೇಕು ಎಂಬ ಕಾರಣಕ್ಕಾಗಿ ಚುನಾವಣಾ ಆಯೋಗ ಜನಸಾಮಾನ್ಯರಿಗೆ ವಿವಿಧ ರೀತಿಯಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ ಎಂದರು.

ADVERTISEMENT

‘ಮತದಾನದ ಅರಿವು ಮೂಡಿಸಲು ಎಲ್ಲ ರೀತಿಯಲ್ಲೂ ಕ್ರಮ ವಹಿಸಲಾಗುತ್ತಿದೆ ಮತ್ತು ಮತದಾನದ ದಿನದಂದು ಹೆಚ್ಚಿನ ಸಂಖ್ಯೆಯಲ್ಲಿ ಜನರನ್ನು ಮತಗಟ್ಟೆಗೆ ಕರೆತಂದು ಮಾತು ಚಲಾಯಿಸುವಂತೆ ಮಾಡುವುದು ನಮ್ಮ ಗುರಿ’ ಎಂದು ಹೇಳಿದರು.

ವಿವಿಧ ಇಲಾಖೆ ಅಧಿಕಾರಿಗಳು, ಗ್ರಾ.ಪಂ ಮತ್ತು ತಾಲ್ಲೂಕು ಪಂಚಾಯಿತಿ ಸಿಬ್ಬಂದಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.