ADVERTISEMENT

ಬೈಕ್ ಅಪಘಾತ; ವ್ಯಕ್ತಿ ಸಾವು

​ಪ್ರಜಾವಾಣಿ ವಾರ್ತೆ
Published 14 ಜನವರಿ 2020, 15:55 IST
Last Updated 14 ಜನವರಿ 2020, 15:55 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಗೌರಿಬಿದನೂರು: ತಾಲ್ಲೂಕಿನ ಕೋಟಾಲದಿನ್ನೆ ಬಳಿ‌ ಸೋಮವಾರ ರಾತ್ರಿ ನಡೆದ ಅಪಘಾತದಲ್ಲಿ ಯುವಕ ಹೊಸೂರು ಗ್ರಾಮದ ಪ್ರತಾಪ್ (26) ಮೃತಪಟ್ಟಿದ್ದು, ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದಾರೆ.

ಇಬ್ಬರು ಯುವಕರು ದೊಡ್ಡಬಳ್ಳಾಪುರದ ರಿಟ್ಟಲ್ ಕಂಪನಿಯ ಉದ್ಯೋಗಿಗಳಾಗಿದ್ದು, ಸೋಮವಾರ ರಾತ್ರಿ ಕೆಲಸ ಮುಗಿಸಿಕೊಂಡು ಮನೆಗೆ ಹಿಂತಿರುಗುವ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ. ಗಾಯಗೊಂಡ ಯುವಕನನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ರವಾನಿಸಲಾಗಿದೆ.

ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.