
ಪ್ರಜಾವಾಣಿ ವಾರ್ತೆ
ಚಿಂತಾಮಣಿ: ನಗರ ಠಾಣೆ ಪೊಲೀಸರು ಒಬ್ಬ ದ್ವಿಚಕ್ರ ವಾಹನ ಕಳ್ಳನನ್ನು ಬಂಧಿಸಿದ್ದಾರೆ. ₹4ಲಕ್ಷ ಬೆಲೆಯ 11 ಬೈಕ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.
ಬಂಧಿತ ಆರೋಪಿ ದೊಡ್ಡಗಂಜೂರು ಗ್ರಾಮದ ದೇವರಾಜ. ಡಿಸೆಂಬರ್ 31ರಂದು ನಗರದ ಝಾನ್ಸಿ ಮೈದಾನ ಬಳಿ ನಿಲ್ಲಿಸಿದ್ದ ಬೈಕ್ ಕಳವಾಗಿದೆ ಎಂದು ಮಂಜುನಾಥ್ ಎಂಬುವರು ದೂರು ನೀಡಿದ್ದರು.
ಪಿ.ಎಸ್.ಐ ಪ್ರಕಾಶ್ ನೇತೃತ್ವದ ಪೊಲೀಸ್ ತಂಡ ಈ ಕಾರ್ಯಾಚರಣೆಯಲ್ಲಿ ತೊಡಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.