ADVERTISEMENT

ಇ-ಕೆವೈಸಿಗೆ ಬಯೊಮೆಟ್ರಿಕ್ ಅಬಾಧಿತ

​ಪ್ರಜಾವಾಣಿ ವಾರ್ತೆ
Published 7 ಮಾರ್ಚ್ 2020, 14:10 IST
Last Updated 7 ಮಾರ್ಚ್ 2020, 14:10 IST
ಕೆ.ಗೋಪಾಲಯ್ಯ
ಕೆ.ಗೋಪಾಲಯ್ಯ   

ಚಿಕ್ಕಬಳ್ಳಾಪುರ: ‘ರಾಜ್ಯದಲ್ಲಿ ‘ಕೋವಿಡ್‌ –19’ ವೈರಸ್‌ ಸೋಂಕು ಪ್ರಕರಣ ಪತ್ತೆಯಾಗಿಲ್ಲ. ಹೀಗಾಗಿ, ಪಡಿತರ ಚೀಟಿಗಳಿಗೆ ಈಗಾಗಲೇ ಹೊಂದಾಣಿಕೆಯಾಗಿರುವ ಆಧಾರ್ ಕಾರ್ಡ್‌ಗಳ ದೃಢೀಕರಣ (ಇ-ಕೆವೈಸಿ) ಪ್ರಕ್ರಿಯೆಗೆ ಬಯೊಮೆಟ್ರಿಕ್ ಬಳಕೆ ಮಾಡಲಾಗುತ್ತದೆ. ಇದರಿಂದ ಏನೂ ಆಗುವುದಿಲ್ಲ’ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಗೋಪಾಲಯ್ಯ ತಿಳಿಸಿದರು.

ನಗರದಲ್ಲಿ ಶನಿವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರ ‘ಕೋವಿಡ್‌ –19’ ವೈರಸ್‌ ಸೋಂಕು ಹರಡುವುದನ್ನು ತಡೆಯಲು ಮುಂಜಾಗ್ರತೆಯಾಗಿ ಸರ್ಕಾರಿ ಹಾಗೂ ಖಾಸಗಿ ಸಂಸ್ಥೆಗಳಲ್ಲಿ ಬಯೊಮೆಟ್ರಿಕ್ ವ್ಯವಸ್ಥೆಯನ್ನು ತಾತ್ಕಾಲಿಕವಾಗಿ ಕೈಬಿಡುವಂತೆ ಸೂಚನೆ ನೀಡಲಾಗುವುದು’ ಎಂಬ ಹೇಳಿಕೆ ಕುರಿತು ಪ್ರತಿಕ್ರಿಯಿಸಿದರು. ಇದೇ ವೇಳೆ ಅವರು, ‘ಈ ವಿಚಾರವಾಗಿ ಸಚಿವ ಸುಧಾಕರ್ ಅವರ ಜತೆಗೆ ಮಾತನಾಡುವೆ’ ಎಂದೂ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT