ADVERTISEMENT

ಮೋದಿ ಸರ್ಕಾರಕ್ಕೆ 7 ವರ್ಷ: ಆಹಾರ ವಿತರಣೆ

ಮೋದಿ ಸರ್ಕಾರಕ್ಕೆ 7 ವರ್ಷ: ಸೇವೆಯೇ ಸಂಘಟನೆ ಹೆಸರಿನಲ್ಲಿ ಕಾರ್ಯಕ್ರಮ

​ಪ್ರಜಾವಾಣಿ ವಾರ್ತೆ
Published 31 ಮೇ 2021, 2:43 IST
Last Updated 31 ಮೇ 2021, 2:43 IST
ಬಿಜೆಪಿ ಮುಖಂಡರು ಅಶಕ್ತರಿಗೆ ಆಹಾರದ ಪೊಟ್ಟಣ ವಿತರಿಸಿದರು
ಬಿಜೆಪಿ ಮುಖಂಡರು ಅಶಕ್ತರಿಗೆ ಆಹಾರದ ಪೊಟ್ಟಣ ವಿತರಿಸಿದರು   

ಚಿಕ್ಕಬಳ್ಳಾಪುರ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ 7 ವರ್ಷ ಪೂರೈಸಿದ ಪ್ರಯುಕ್ತ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ನಗರದಲ್ಲಿ ಭಾನುವಾರ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದರು.

‘ಸೇವೆಯೇ ಸಂಘಟನೆ’ ಹೆಸರಿನ ಅಡಿಯಲ್ಲಿ ಕಾರ್ಯಕ್ರಮ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಚೇರಿ ಬಳಿ ಮುಖಂಡರು ಗಿಡಗಳನ್ನು ನೆಟ್ಟರು. ಬಡವರಿಗೆ ಆಹಾರ ಪೊಟ್ಟಣ ವಿತರಣೆ, ನಂದಿಯ ಸುಲ್ತಾನ್ ಪೇಟೆ ಎಸ್.ಎಸ್.ಎಸ್ ಅನಾಥಾಶ್ರಮಕ್ಕೆ ಸೋಪು, ಸ್ಯಾನಿಟೈಸರ್, ಮಾಸ್ಕ್ ನೀಡಲಾಯಿತು.

ಪ್ರಧಾನಿ ನರೇಂದ್ರ ಮೋದಿ ಅವರು ದೇಶವನ್ನು ಅಭಿವೃದ್ಧಿಯ ಪಥದತ್ತ ಕೊಂಡೊಯ್ಯುತ್ತಿದ್ದಾರೆ. ಅವರ ನೇತೃತ್ವದಲ್ಲಿ ಭಾರತವು ವಿಶ್ವಮನ್ನಣೆಗಳಿಸಿದೆ. ಕೊರೊನಾದ ಈ ಸಂದರ್ಭದಲ್ಲಿ ಎಲ್ಲರೂ ಒಗ್ಗೂಡಿ ಈ ಸೋಂಕು ಓಡಿಸಬೇಕು ಎಂದು ಮುಖಂಡರು ಹೇಳಿದರು.

ADVERTISEMENT

ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ರಾಮಲಿಂಗಪ್ಪ, ಬೆಂಗಳೂರು ಗ್ರಾಮಾಂತರ ವಿಭಾಗದ ಸಂಘಟನಾ ಪ್ರಧಾನ ಕಾರ್ಯದರ್ಶಿ ಕಾಂತರಾಜ್, ನಗರ ಮಂಡಲ ಅಧ್ಯಕ್ಷ ವಿ.ಶ್ರೀನಿವಾಸ್, ಉಪಾಧ್ಯಕ್ಷ ಬಿ.ವಿ.ಆನಂದ್, ಮುರಳಿ, ಕಾರ್ಯದರ್ಶಿ ಶ್ರೀನಿವಾಸ್, ಜಿಲ್ಲಾ ಹಿಂದುಳಿದ ವರ್ಗಗಳ ಘಟಕದ ಅಧ್ಯಕ್ಷ ಸಿ.ಎಸ್.ಮಂಜುನಾಥ್, ಒಬಿಸಿ ನಗರ ಅಧ್ಯಕ್ಷ ಬಾಲಕೃಷ್ಣ, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಎಚ್.ಕೆ.ಲಕ್ಷ್ಮಿಪತಿ, ಜಿಲ್ಲಾ ಕಾರ್ಯದರ್ಶಿ ಆರ್.ಎನ್. ಅಶೋಕ್, ಜಿಲ್ಲಾ ಮಾಧ್ಯಮ ಪ್ರಮುಖ್ ವಿ.ಮಧುಚಂದ್ರ, ಸಹ ವಕ್ತಾರ ರಾಮಣ್ಣ, ರಾಷ್ಟ್ರೀಯ ಪರಿಷತ್ ಸದಸ್ಯ ಲಕ್ಷ್ಮಿನಾರಾಯಣ ಗುಪ್ತ, ಹಿರಿಯ ಮುಖಂಡ ಬೈರೇಗೌಡ, ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಕಲಾ ನಾಗರಾಜ್, ಸುಮಿತ್ರಾ ಇತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.