ADVERTISEMENT

ಬಿಜೆಪಿ ಮಂಡಲ ಪ್ರಶಿಕ್ಷಣ ವರ್ಗ ಕಾರ್ಯಕ್ರಮ

​ಪ್ರಜಾವಾಣಿ ವಾರ್ತೆ
Published 24 ನವೆಂಬರ್ 2020, 3:35 IST
Last Updated 24 ನವೆಂಬರ್ 2020, 3:35 IST
ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಬಿಜೆಪಿ ಕಾರ್ಯಕರ್ತರು
ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಬಿಜೆಪಿ ಕಾರ್ಯಕರ್ತರು   

ಗೌರಿಬಿದನೂರು: ‘ಶಿಸ್ತು ಮತ್ತು ಬದ್ಧತೆಗೆ ಹೆಸರಾದ ಬಿಜೆಪಿಯಲ್ಲಿ ಕಾರ್ಯಕರ್ತರನ್ನು ಸೇನಾನಿಗಳಂತೆ ಸಜ್ಜುಗೊಳಿಸಲು ವರ್ಷಕ್ಕೊಮ್ಮೆ ತರಬೇತಿ ನೀಡುವ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ’ ಎಂದು ಬಿಜೆಪಿ ಜಿಲ್ಲಾ ಅಧ್ಯಕ್ಷ ರಾಮಲಿಂಗಪ್ಪ ತಿಳಿಸಿದರು.

ತಾಲ್ಲೂಕಿನ ವಿದುರಾಶ್ವತ್ಥದಲ್ಲಿ ಬಿಜೆಪಿ ಗ್ರಾಮಾಂತರ ಮಂಡಲದಿಂದ 2 ದಿನಗಳ ಕಾಲ ಹಮ್ಮಿಕೊಂಡಿದ್ದ ಮಂಡಲ ಪ್ರಶಿಕ್ಷಣ ವರ್ಗ ಉದ್ಘಾಟಿಸಿ ಅವರು ಮಾತನಾಡಿದರು.

ದೇಶದ ಸುಭದ್ರತೆ ಬಗ್ಗೆ ಕಾಳಜಿ ಇರುವುದು ಬಿಜೆಪಿ ಕಾರ್ಯಕರ್ತರಲ್ಲಿ ಮಾತ್ರ. ಕಾರ್ಯಕರ್ತರು ಯಾವುದೇ ಕಾರಣಕ್ಕೂ ಹುಮ್ಮಸ್ಸು ಕಳೆದುಕೊಳ್ಳಬಾರದು. ಬದುಕಿನಲ್ಲಿ ಬಿಜೆಪಿ ಜೊತೆ ಗುರುತಿಸಿಕೊಳ್ಳುವುದೇ ದೊಡ್ಡ ಸೌಭಾಗ್ಯವಾಗಿದೆ. ಪ್ರತೀ ಕೆಲಸವನ್ನು ಶ್ರದ್ಧೆ ಮತ್ತು ನಿಷ್ಠೆಯಿಂದ ಮಾಡಿದಲ್ಲಿ ಸಮಾಜದಲ್ಲಿ ಉತ್ತಮ ಪ್ರಜೆ ಹಾಗೂ ಪಕ್ಷದಲ್ಲಿ ನಿಷ್ಠಾವಂತ ಕಾರ್ಯಕರ್ತರಾಗಿರಲು ಸಾಧ್ಯವಾಗುತ್ತದೆ ಎಂದು ಹೇಳಿದರು.

ADVERTISEMENT

ಬಿಜೆಪಿ ರಾಜ್ಯ ಸಮಿತಿಯ ವಿಶೇಷ ಆಹ್ವಾನಿತ ಎನ್.ಎಂ. ರವಿನಾರಾಯಣರೆಡ್ಡಿ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಈ ದೇಶದ ಶಕ್ತಿಯಾಗಿದ್ದು, ಅವರ ಮಾರ್ಗದರ್ಶನ ಮತ್ತು ಪ್ರೋತ್ಸಾಹದಿಂದ ಇಡೀ ದೇಶದಲ್ಲಿ ಪಕ್ಷ ಸಂಘಟನೆ ಸಾಧ್ಯವಾಗಿದೆ. ಮುಂದಿನ ದಿನಗಳಲ್ಲಿ ಎಲ್ಲ ಕಾರ್ಯಕರ್ತರು ಪ್ರಾಮಾಣಿಕವಾಗಿ ಕಾರ್ಯ ನಿರ್ವಹಿಸಿ ಅವರ ಕೈ ಬಲಪಡಿಸುವ ಕಾರ್ಯ ಮಾಡಬೇಕಾಗಿದೆ ಎಂದು ಹೇಳಿದರು.

ವೇದಿಕೆಯಲ್ಲಿ ಬಿಜೆಪಿ ಮಾಜಿ ಜಿಲ್ಲಾ ಅಧ್ಯಕ್ಷ ಡಾ.ಮಂಜುನಾಥ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಚ್.ಎಸ್. ಮುರಳಿಧರ್, ನಗರಾಧ್ಯಕ್ಷ ಎ. ಮೋಹನ್ ಇದ್ದರು. ತಾಲ್ಲೂಕು ಅಧ್ಯಕ್ಷ ರಮೇಶ್ ರಾವ್ ಶೆಲ್ಕೆ ಪ್ರಾಸ್ತಾವಿಕ ಮಾತನಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.