ADVERTISEMENT

ಸುಧಾಕರ್ ದಲಿತ ವಿರೋಧಿ ಎಂದು ಕರಪತ್ರ ಅಂಟಿಸಲು ಮುಂದಾದ ಪ್ರದೀಪ ಈಶ್ವರ್ ಬೆಂಬಲಿಗರು

​ಪ್ರಜಾವಾಣಿ ವಾರ್ತೆ
Published 10 ಆಗಸ್ಟ್ 2025, 6:16 IST
Last Updated 10 ಆಗಸ್ಟ್ 2025, 6:16 IST
ಪ್ರದೀಪ್ ಈಶ್ವರ್ ಮತ್ತು ಸುಧಾಕರ್
ಪ್ರದೀಪ್ ಈಶ್ವರ್ ಮತ್ತು ಸುಧಾಕರ್    

ಚಿಕ್ಕಬಳ್ಳಾಪುರ: ಜಿ.ಪಂ ಮುಖ್ಯಲೆಕ್ಕಾಧಿಕಾರಿ ಕಾರು ಚಾಲಕ ಬಾಬು ಆತ್ಮಹತ್ಯೆ ಪ್ರಕರಣ ಚಿಕ್ಕಬಳ್ಳಾಪುರದಲ್ಲಿ ರಾಜಕೀಯ ರಂಗನ್ನು ತೀವ್ರವಾಗಿ ಪಡೆಯುತ್ತಿದೆ.

ಸುಧಾಕರ್ ದಲಿತ ವಿರೋಧಿ ಎಂದು ಅವರ ಭಾವಚಿತ್ರವುಳ್ಳ ಪೋಸ್ಟರ್ ಗಳನ್ನು ಅಂಟಿಸಲು ಮುಂದಾಗಿದ್ದವರನ್ನು ಸಂಸದರ ಬೆಂಬಲಿಗರು ತಡೆದಿದ್ದಾರೆ.

ಶನಿವಾರ ನಡುರಾತ್ರಿ ಕಾಂಗ್ರೆಸ್ ಮುಖಂಡರು ಹಾಗೂ ಶಾಸಕ ಪ್ರದೀಪ್ ಈಶ್ವರ್ ಬೆಂಬಲಿಗರಾದ ವಿನಯ್ ಮತ್ತು ಹಮೀಮ್ ಎಂಬುವವರು ಫೋಸ್ಟರ್ ಅಂಟಿಸಲು ಮುಂದಾಗಿದ್ದಾರೆ. ಇದನ್ನು ತಡೆದ ಸಂಸದರ ಬೆಂಬಲಿಗರು ವಿಡಿಯೊ ಮಾಡಿದ್ದಾರೆ.

ADVERTISEMENT

ತಕ್ಷಣ ಸ್ಥಳಕ್ಕೆ ಬಂದ ಪೊಲೀಸರು ಶಾಸಕರ ಬೆಂಬಲಿಗರನ್ನು ಕರೆದೊಯ್ದಿದ್ದಾರೆ.

ಈ ವಿಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. ನಡುರಾತ್ರಿಯೇ ಪೊಲೀಸ್ ಠಾಣೆ ಎದುರು ಬಿಜೆಪಿ ಕಾರ್ಯಕರ್ತರು ಮತ್ತು ಸುಧಾಕರ್ ಬೆಂಬಲಿಗರು ಜಮಾಯಿಸಿದ್ದಾರೆ. ಪ್ರಕರಣ ದಾಖಲಿಸಬೇಕು ಎಂದು ಒತ್ತಾಯಿಸಿದ್ದಾರೆ.

ಸಂಸದ ಸುಧಾಕರ್ ಅವರನ್ನು ದಲಿತ ವಿರೋಧಿ ಎಂದು ಅಪಪ್ರಚಾರ ಮಾಡಲು ಶಾಸಕರ ಅಪ್ತರು ಮುಂದಾಗಿದ್ದಾರೆ ಎಂದು ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.

ಬಾಬು ಆತ್ಮಹತ್ಯೆ ಪ್ರಕರಣದಲ್ಲಿ ಸಂಸದ ಡಾ.ಕೆ.ಸುಧಾಕರ್ ಮೊದಲ ಆರೋಪಿ ಆಗಿದ್ದಾರೆ. ಅವರ ಮೇಲೆ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.