ADVERTISEMENT

ಬಿಜೆಪಿ ಮಹಿಳಾ ಮೋರ್ಚಾ ಸಭೆ

​ಪ್ರಜಾವಾಣಿ ವಾರ್ತೆ
Published 18 ಜನವರಿ 2021, 2:04 IST
Last Updated 18 ಜನವರಿ 2021, 2:04 IST
ಚಿಂತಾಮಣಿಯಲ್ಲಿ ಶನಿವಾರ ನಡೆದ ಬಿಜೆಪಿ ಮಹಿಳಾ ಮೋರ್ಚಾದ ಸಭೆಯಲ್ಲಿ ಜಿಲ್ಲಾ ಘಟಕದ ಅಧ್ಯಕ್ಷೆ ಮುನಿಲಕ್ಷ್ಮಮ್ಮ, ಉಪಾಧ್ಯಕ್ಷೆ ಸುಮಿತ್ರಮ್ಮ ಭಾಗವಹಿಸಿದ್ದರು
ಚಿಂತಾಮಣಿಯಲ್ಲಿ ಶನಿವಾರ ನಡೆದ ಬಿಜೆಪಿ ಮಹಿಳಾ ಮೋರ್ಚಾದ ಸಭೆಯಲ್ಲಿ ಜಿಲ್ಲಾ ಘಟಕದ ಅಧ್ಯಕ್ಷೆ ಮುನಿಲಕ್ಷ್ಮಮ್ಮ, ಉಪಾಧ್ಯಕ್ಷೆ ಸುಮಿತ್ರಮ್ಮ ಭಾಗವಹಿಸಿದ್ದರು   

ಚಿಂತಾಮಣಿ: ಬಿಜೆಪಿ ಕಾರ್ಯಕರ್ತರಿಗೆ ಹೆಚ್ಚಿನ ಮನ್ನಣೆ, ಗೌರವ ದೊರೆಯುತ್ತದೆ. ಪಕ್ಷದ ತತ್ವ, ಸಿದ್ಧಾಂತ, ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಾಧನೆಗಳನ್ನು ಜನರಿಗೆ ಮನವರಿಕೆ ಮಾಡಿಕೊಡುವ ಮೂಲಕ ಸಂಘಟನೆಗಾಗಿ ದುಡಿಯಬೇಕು ಎಂದು ಮಹಿಳಾ ಮೋರ್ಚಾದ ಜಿಲ್ಲಾ ಘಟಕದ ಅಧ್ಯಕ್ಷೆ ಮುನಿಲಕ್ಷ್ಮಮ್ಮ ಮನವಿ ಮಾಡಿದರು.

ನಗರದ ಬಿಜೆಪಿ ಕಚೇರಿಯಲ್ಲಿ ಶನಿವಾರ ಹಮ್ಮಿಕೊಂಡಿದ್ದ ಮಹಿಳಾ ಮೋರ್ಚಾದ ಪ್ರಥಮ ಸಭೆಯಲ್ಲಿ ಅವರು ಮಾತನಾಡಿದರು.

ಮಹಿಳೆಯರು ಹೆಚ್ಚಾಗಿ ರಾಜಕೀಯ ಕ್ಷೇತ್ರಕ್ಕೆ ಬರಬೇಕು. ಎಲ್ಲ ಕ್ಷೇತ್ರಗಳಲ್ಲಿ ಮಹಿಳೆಯರು ಮುಂಚೂಣಿಲ್ಲಿದ್ದರೂ ರಾಜಕೀಯದಲ್ಲಿ ಮಾತ್ರ ಮಹಿಳಾ ಪ್ರಾತಿನಿಧ್ಯ ಕಡಿಮೆ. ಮಹಿಳೆಯರು ಸೇರಿದಂತೆ ಕಾರ್ಯಕರ್ತರೇ ಪಕ್ಷದ ಜೀವಾಳ. ಕೆಳಮಟ್ಟದಲ್ಲಿ ದುಡಿಯುವ ಕಾರ್ಯಕರ್ತರಿದ್ದರೆ ಮಾತ್ರ ಪಕ್ಷ ಬಲಿಷ್ಠಗೊಳ್ಳುತ್ತದೆ ಎಂದು ಹೇಳಿದರು.

ADVERTISEMENT

ಗ್ರಾಮಾಂತರ ಮಂಡಲದ ಅಧ್ಯಕ್ಷ ಶಿವಾರೆಡ್ಡಿ ಮಾತನಾಡಿ, ಪಕ್ಷದಲ್ಲಿ ಅಧಿಕಾರ ಅನುಭವಿಸಿದವರು ಮಾಜಿಯಾಗುತ್ತಾರೆ. ಆದರೆ, ಕಾರ್ಯಕರ್ತರು ಮಾತ್ರ ನಿರಂತರವಾಗಿ ಕಾರ್ಯಕರ್ತರಾಗಿರುತ್ತಾರೆ ಎಂದರು.

ನಗರ ಘಟಕದ ಅಧ್ಯಕ್ಷ ಮಹೇಶ್ ಬೈ ಮಾತನಾಡಿದರು. ಮಹಿಳಾ ಮೋರ್ಚಾದ ಜಿಲ್ಲಾ ಘಟಕದ ಉಪಾಧ್ಯಕ್ಷೆ ಸುಮಿತ್ರಮ್ಮ, ತಾಲ್ಲೂಕು ಘಟಕದ ಅಧ್ಯಕ್ಷೆ ಭಾಗ್ಯಮ್ಮ, ಪದಾಧಿಕಾರಿಗಳಾದ ಕಲಾ ನಾಗರಾಜ್, ಗೌತಮಿ, ಶೋಭಾರಾಮ್, ಪರಿಮಳಾ, ಪಂಕಜಾ, ಸೀತಮ್ಮ, ಕೈವಾರ ಶ್ರೀದೇವಿ, ಶ್ವೇತಾ, ಶ್ರುತಿ, ಲಕ್ಷ್ಮಿದೇವಮ್ಮ, ನಾಗರತ್ನಮ್ಮ, ಸುಮಿತ್ರಾ, ಕಾತ್ಯಾಯಿನಿ, ನಾರಾಯಣರೆಡ್ಡಿ, ಕಾಗತಿ ಎಂ.ಎನ್. ನಾಗರಾಜ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.