ಸಾಂದರ್ಭಿಕ ಚಿತ್ರ
– ಪ್ರಜಾವಾಣಿ ಚಿತ್ರ
ಚಿಂತಾಮಣಿ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಭಯೋತ್ಪಾದಕರು ನಡೆಸಿದ ಭೀಕರ ಹತ್ಯಾಕಾಂಡವನ್ನು ತಾಲ್ಲೂಕು ಬ್ರಾಹ್ಮಣ ಮಹಾಸಭಾ ಖಂಡಿಸಿದೆ.
ಇತ್ತೀಚಿನ ವರ್ಷಗಳಲ್ಲಿ ಶಾಂತಿಯಿಂದ ಭೂಲೋಕ ಸ್ವರ್ಗದ ವೈಭವವನ್ನು ಪ್ರವಾಸಿಗರಿಗೆ ಉಣಬಡಿಸುತ್ತಿದ್ದ ಕಾಶ್ಮೀರ ಘಟನೆಯಿಂದ ಮತ್ತೆ ಸೊರಗಿದಂತಾಗಿದೆ. ಭಯೋತ್ಪಾದಕರಿಗೆ ಅವರದೇ ಭಾಷೆಯಲ್ಲಿ ಕೇಂದ್ರ ಸರ್ಕಾರ ಬುದ್ಧಿ ಕಲಿಸಬೇಕು. ಭಯೋತ್ಪಾದಕರ ಹೆಡೆಮುರಿ ಕಟ್ಟಿ ಸಾರ್ವಜನಿಕವಾಗಿ ಅವರನ್ನು ಶಿಕ್ಷಿಸಬೇಕು ಎಂದು ಮಹಾಸಭಾ ಅಧ್ಯಕ್ಷ ಎನ್.ಕೃಷ್ಣ ಒತ್ತಾಯಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.