ADVERTISEMENT

ಸಂಭ್ರಮದ ಬ್ರಾಹ್ಮಿಣಿದೇವಿ ರಥೋತ್ಸವ

​ಪ್ರಜಾವಾಣಿ ವಾರ್ತೆ
Published 9 ಫೆಬ್ರುವರಿ 2020, 12:03 IST
Last Updated 9 ಫೆಬ್ರುವರಿ 2020, 12:03 IST
ಬ್ರಾಹ್ಮಿಣಿದೇವಿ ರಥೋತ್ಸವ ಅದ್ಧೂರಿಯಾಗಿ ನೆರವೇರಿತು.
ಬ್ರಾಹ್ಮಿಣಿದೇವಿ ರಥೋತ್ಸವ ಅದ್ಧೂರಿಯಾಗಿ ನೆರವೇರಿತು.   

ಚಿಕ್ಕಬಳ್ಳಾಪುರ: ತಾಲ್ಲೂಕಿನ ಹನುಮಂತಪುರದ ಬ್ರಾಹ್ಮಿಣಿದೇವಿ ರಥೋತ್ಸವ ಭಾನುವಾರ ಅದ್ಧೂರಿಯಾಗಿ ನೆರವೇರಿತು.

ರಥೋತ್ಸವದಲ್ಲಿ ವಿವಿಧ ರಾಜ್ಯಗಳಿಂದ ಭಕ್ತರು ಬಂದಿದ್ದರು. ಸುತ್ತಮುತ್ತಲಿನ ಗ್ರಾಮಗಳಿಂದ ಬಂದಿದ್ದ ಭಕ್ತರು ಸರತಿ ಸಾಲಿನಲ್ಲಿ ನಿಂತು ದೇವಿ ದರ್ಶನ ಪಡೆದರು. ವಿಶೇಷ ಪೂಜೆ ಸಲ್ಲಿಸಿ, ಭಕ್ತಿ ಸಮರ್ಪಿಸಿದರು.

ರಥೋತ್ಸವ ಪ್ರಯುಕ್ತ ಬೆಳಿಗ್ಗೆಯಿಂದಲೇ ವಿಶೇಷ ಅಲಂಕಾರ, ಅಭಿಷೇಕ, ಪೂಜೆ ನಡೆದವು. ವಿವಿಧ ಧಾರ್ಮಿಕ ವಿಧಿ ವಿಧಾನಗಳ ಮೂಲಕ ರಥವನ್ನು ಅಲಂಕರಿಸಲಾಗಿತ್ತು.

ADVERTISEMENT

ರಥದಲ್ಲಿ ಬ್ರಾಹ್ಮಿಣಿದೇವಿ ದೇವಿ ಮೂರ್ತಿ ಪ್ರತಿಷ್ಠಾಪಿಸಿ, ಮಂಗಳವಾದ್ಯಗಳೊಂದಿಗೆ ಊರಿನಲ್ಲಿ ಪ್ರದಕ್ಷಿಣೆ ಮಾಡಲಾಯಿತು. ಭಕ್ತರು ಹೆಜ್ಜೆಗೊಂದು ತೆಂಗಿನಕಾಯಿ ಒಡೆದು ಹರಕೆ ತೀರಿಸಿದರು. ಉಯ್ಯಾಲೋತ್ಸವ ಮತ್ತಿತರ ಧಾರ್ಮಿಕ ಕಾರ್ಯ ನಡೆದವು. ಮಾತಾ ಮಹಾದೇವಿ ಭಕ್ತಮಂಡಲಿ ವತಿಯಿಂದ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.