ADVERTISEMENT

ಗುಡಿಬಂಡೆ | ಹೆದ್ದಾರಿಯಲ್ಲಿ ಬಸ್ ಪಲ್ಟಿ: 13ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

​ಪ್ರಜಾವಾಣಿ ವಾರ್ತೆ
Published 11 ಆಗಸ್ಟ್ 2024, 14:39 IST
Last Updated 11 ಆಗಸ್ಟ್ 2024, 14:39 IST
ಗುಡಿಬಂಡೆ ತಾಲ್ಲೂಕು ಹೆದ್ದಾರಿ ರಸ್ತೆ ಚಂಡೂರು ಕ್ರಾಸ್ ಬಳಿ ಬಸ್ ಅಪಘಾತಕ್ಕೆ ಒಳಗಾಗಿರುವುದು
ಗುಡಿಬಂಡೆ ತಾಲ್ಲೂಕು ಹೆದ್ದಾರಿ ರಸ್ತೆ ಚಂಡೂರು ಕ್ರಾಸ್ ಬಳಿ ಬಸ್ ಅಪಘಾತಕ್ಕೆ ಒಳಗಾಗಿರುವುದು   

ಗುಡಿಬಂಡೆ: ಬೆಂಗಳೂರು- ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿ 44ರ ಚೆಂಡೂರು ಕ್ರಾಸ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಆಂಧ್ರಪ್ರದೇಶದ ಬಸ್ ಭಾನುವಾರ ಮಧ್ಯಾಹ್ನ ಪಲ್ಟಿಯಾಗಿದೆ.

13ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಇಬ್ಬರಿಗೆ ಗಂಭೀರ ಗಾಯವಾಗಿದೆ.

ಬೆಂಗಳೂರಿನಿಂದ ಪುಟ್ಟಪರ್ತಿ ಕಡೆಗೆ ಹೋಗುತ್ತಿದ್ದ ಆಂಧ್ರಪ್ರದೇಶದ ಬಸ್ ಇದಾಗಿತ್ತು. ಬಸ್‌ನಲ್ಲಿ ಸುಮಾರು 30 ಪ್ರಯಾಣಿಕರಿದ್ದರು. ಇಬ್ಬರು ಸ್ಥಿತಿ ಗಂಭೀರವಾಗಿದ್ದು ಚಿಕ್ಕಬಳ್ಳಾಪುರ ಜಿಲ್ಲೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದವರು ಬಾಗೇಪಲ್ಲಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ADVERTISEMENT

ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ಆಗಮಿಸಿದ ಗುಡಿಬಂಡೆ ಪೊಲೀಸರು ಪರಿಶೀಲನೆ ನಡೆಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.