ಚಿಕ್ಕಬಳ್ಳಾಪುರ: ತಾಲ್ಲೂಕಿನ ಐತಿಹಾಸಿಕ ನಂದಿಗಿರಿಧಾಮದಲ್ಲಿ ಜುಲೈ 2ರಂದು ಸಚಿವ ಸಂಪುಟ ಸಭೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ನಂದಿಗಿರಿಧಾಮ ಮತ್ತು ಪ್ರಸಿದ್ಧ ಚಾರಣತಾಣ ಸ್ಕಂದಗಿರಿಗೆ ಜುಲೈ 3ರ ಮಧ್ಯಾಹ್ನ 2ರವರೆಗೆ ಪ್ರವಾಸಿಗರು ಹಾಗೂ ವಾಹನಗಳ ಪ್ರವೇಶ ನಿರ್ಬಂಧಿಸಲಾಗಿದೆ.
ಈ ಅವಧಿಯಲ್ಲಿ ಗಿರಿಧಾಮದಲ್ಲಿನ ವಸತಿ ನಿಲಯದ ಕೊಠಡಿಗಳನ್ನು ಮುಂಗಡವಾಗಿ ಕಾಯ್ದಿರಿಸುವಿಕೆಯನ್ನೂ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ ತಿಳಿಸಿದ್ದಾರೆ.
ಗಿರಿಧಾಮಕ್ಕೆ ಹೋಗಲು ಮತ್ತು ಬರಲು ಒಂದೇ ರಸ್ತೆ ಇರುವುದರಿಂದ ವಾಹನ ದಟ್ಟಣೆ ಹೆಚ್ಚಾಗಿರುತ್ತದೆ. ಗಿರಿಧಾಮದಲ್ಲಿ ಕಡಿದಾದ ತಿರುವುಗಳಿವೆ. ವಾಹನಗಳು ಮತ್ತು ಪ್ರವಾಸಿಗರನ್ನು ನಿಯಂತ್ರಿ ಸುವುದು ಕಷ್ಟವಾಗುತ್ತದೆ.ಅಪಘಾತಗಳಾಗುವ ಸಾಧ್ಯತೆ ಹೆಚ್ಚಿರುತ್ತವೆ. ಮುನ್ನೆಚ್ಚರಿಕಾ ಕ್ರಮವಾಗಿ ಪ್ರವೇಶ ನಿರ್ಬಂಧಿಸ
ಲಾಗಿದೆ ಎಂದು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.