ಚಿಕ್ಕಬಳ್ಳಾಪುರ: ತಾಲ್ಲೂಕಿನ ನಂದಿಗಿರಿಧಾಮದಲ್ಲಿ ಜೂ.19ರಂದು ನಿಗದಿಯಾಗಿದ್ದ ಸಚಿವ ಸಂಪುಟ ಸಭೆಯನ್ನು ವಿಧಾನಸೌಧಕ್ಕೆ ಸ್ಥಳಾಂತರಿಸಿರುವುದಕ್ಕೆ ಸಂಸದ ಡಾ.ಕೆ.ಸುಧಾಕರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಗರದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ 15 ವಿಧಾನಸಭಾ ಕ್ಷೇತ್ರಗಳಲ್ಲಿ 12ರಲ್ಲಿ ಕಾಂಗ್ರೆಸ್ ಪಕ್ಷದ ಶಾಸಕರು ಇದ್ದಾರೆ.ಈ ಶಾಸಕರನ್ನು ನೋಡಿಯಾದರೂ ನಂದಿ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ ನಡೆಸಬೇಕಾಗಿತ್ತು ಎಂದರು.
ಬಯಲು ಸೀಮೆಯ ಈ ಮೂರು ಜಿಲ್ಲೆಗಳು ಕಾಂಗ್ರೆಸ್ ಪಕ್ಷದ ನಕ್ಷೆಯಲ್ಲಿ ಇಲ್ಲ ಎನಿಸುತ್ತದೆ. ಅವರ ನಕ್ಷೆಯಲ್ಲಿ ಈ ಜಿಲ್ಲೆಗಳು ಬೇರೆ ರಾಜ್ಯಗಳಿಗೆ ಸೇರಿರಬೇಕು ಎಂದು ವ್ಯಂಗ್ಯವಾಡಿದರು.
ಎತ್ತಿನಹೊಳೆ ಯೋಜನೆ, ಕೆ.ಸಿ ವ್ಯಾಲಿ, ಎಚ್.ಎನ್.ವ್ಯಾಲಿ ನೀರಿನ ಮೂರು ಹಂತದ ಶುದ್ದೀಕರಣ ಸೇರಿದಂತೆ ಹಲವು ಯೋಜನೆಗಳ ಕಾರ್ಯಗತದ ಬಗ್ಗೆ ನಿರೀಕ್ಷೆ ಇದ್ದವು ಎಂದರು.
ಏಕಾಏಕಿ ಸಭೆ ಸ್ಥಳಾಂತರಿಸಿರುವುದು ಬೇಸರಕ್ಕೆ ಕಾರಣವಾಗಿದೆ. ಕೋಲಾರ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಬಗ್ಗೆ ಈ ಸರ್ಕಾರ ನಿರ್ಲಕ್ಷ್ಯವನ್ನು ತೋರುತ್ತಿದೆ ಎಂದು ಆರೋಪಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.