ADVERTISEMENT

ತಿರುಮಲಾಪುರ ರಥೋತ್ಸವ ರದ್ದು

​ಪ್ರಜಾವಾಣಿ ವಾರ್ತೆ
Published 28 ಮಾರ್ಚ್ 2021, 5:07 IST
Last Updated 28 ಮಾರ್ಚ್ 2021, 5:07 IST

ಚಿಂತಾಮಣಿ: ತಾಲ್ಲೂಕಿನ ತಿರುಮಲಾಪುರ ಗ್ರಾಮದದಲ್ಲಿ ಮಾರ್ಚ್‌ 28ರಂದು ರಾತ್ರಿ ಅತ್ಯಂತ ವೈಭವದಿಂದ ನಡೆಸಲು ಉದ್ದೇಶಿಸಿದ್ದ ಶ್ರೀಲಕ್ಷ್ಮೀನರಸಿಂಹಸ್ವಾಮಿಯ ಬೆಳದಿಂಗಳ ಬ್ರಹ್ಮ ರಥೋತ್ಸವವನ್ನು ಕೊರೊನಾ ಸೋಂಕು ಹರಡುವ ಹಿನ್ನೆಲೆಯಲ್ಲಿ ರದ್ದುಪಡಿಸಿ ತಹಶೀಲ್ದಾರ್ ಡಿ. ಹನುಮಂತರಾಯಪ್ಪ ಆದೇಶ ಹೊರಡಿಸಿದ್ದಾರೆ.

ಕೋವಿಡ್ ಎರಡನೇ ಅಲೆ ವ್ಯಾಪಕವಾಗುತ್ತಿದೆ. ತಿರುಮಲಾಪುರ ಜಾತ್ರೆಯು ಪ್ರತಿವರ್ಷ ವೈಭವದಿಂದ ನಡೆಯುತ್ತಿದ್ದು ಸಾವಿರಾರು ಜನರು ಸೇರುತ್ತಾರೆ. ಈ ಬಾರಿ ಕೇವಲ 500 ಜನರಿಗೆ ಮಾತ್ರ ಅವಕಾಶವಿದೆ. ರಾತ್ರಿವೇಳೆಯಲ್ಲಿ ಜಾತ್ರೆ ನಡೆಯುವುದರಿಂದ ಮಾರ್ಗಸೂಚಿಯಂತೆ ಜನರನ್ನು ನಿಯಂತ್ರಿಸಲು ತೊಂದರೆಯಾಗುತ್ತದೆ ಎಂದು ತಿಳಿಸಿದ್ದಾರೆ.

ದೇವಾಲಯದಲ್ಲಿ ನಡೆಯುತ್ತಿದ್ದ ಎಲ್ಲ ಧಾರ್ಮಿಕ ಕಾರ್ಯಗಳನ್ನು ಸಂಪ್ರದಾಯದಂತೆ ಸಾಂಕೇತಿಕವಾಗಿ ಆಚರಿಸಬೇಕು. ದೇವಾಲಯದ ಒಳಾವರಣ ಹಾಗೂ ಪ್ರಾಕಾರದೊಳಗೆ ಅರ್ಚಕರು ಮತ್ತು ಸಿಬ್ಬಂದಿಯ ಉಪಸ್ಥಿತಿಯಲ್ಲಿ ನಡೆಸಬೇಕು ಎಂದು ಸೂಚಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.