ADVERTISEMENT

ಕ್ಯಾನ್ಸರ್ ತಪಾಸಣಾ ಶಿಬಿರ

​ಪ್ರಜಾವಾಣಿ ವಾರ್ತೆ
Published 12 ನವೆಂಬರ್ 2021, 4:19 IST
Last Updated 12 ನವೆಂಬರ್ 2021, 4:19 IST

ಚಿಂತಾಮಣಿ: ರಾಷ್ಟ್ರೀಯ ಸೇವಾ ಯೋಜನಾ ಘಟಕ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳೂರಿನ ಯೆನೆಪೋಯಾ ವಿಶ್ವವಿದ್ಯಾಲಯ ಹಾಗೂ ನಗರದ ಮೆಗಾ ಫ್ಯಾನ್ಸ್ ಅಸೋಸಿಯೇಷನ್‌ನಿಂದ ನ. 14ರಂದು ಬೆಳಿಗ್ಗೆ 9ರಿಂದ ಮಧ್ಯಾಹ್ನ 3ಗಂಟೆವರೆಗೆ ತಾಲ್ಲೂಕಿನ ಕೈವಾರದ ಅಂಜುಮಾನ್ ಷಾದಿ ಮಹಲ್‌ನಲ್ಲಿ ಕ್ಯಾನ್ಸರ್ ಜಾಗೃತಿ ಮತ್ತು ತಪಾಸಣೆ, ರಕ್ತದೊತ್ತಡ, ಮಧುಮೇಹ ತಪಾಸಣಾ ಶಿಬಿರ ಆಯೋಜಿಸಲಾಗಿದೆ.

ಶಿಬಿರದಲ್ಲಿ ತಜ್ಞ ವೈದ್ಯರು ಉಚಿತ ಕ್ಯಾನ್ಸರ್ ಜಾಗೃತಿ ಮತ್ತು ತಪಾಸಣೆ, ಸ್ತ್ರೀರೋಗ ತಪಾಸಣೆ, ಚರ್ಮರೋಗ, ಕಿವಿ, ಮೂಗು, ಗಂಟಲು ಮತ್ತು ಕಿವಿ ತಪಾಸಣೆ, ದಂತ ತಪಾಸಣೆ, ಮಧುಮೇಹ ಮತ್ತು ರಕ್ತದೊತ್ತಡ ತಪಾಸಣೆ ಮಾಡುತ್ತಾರೆ. ಉಚಿತವಾಗಿ ಔಷಧಿ ಸಹ ವಿತರಿಸಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT