ADVERTISEMENT

ಬಿಜೆಪಿ ಕಾರ್ಯಕರ್ತರ ಸಂಭ್ರಮಾಚರಣೆ

​ಪ್ರಜಾವಾಣಿ ವಾರ್ತೆ
Published 12 ನವೆಂಬರ್ 2020, 6:38 IST
Last Updated 12 ನವೆಂಬರ್ 2020, 6:38 IST
ಬಾಗೇಪಲ್ಲಿಯ ಬಸ್‌ನಿಲ್ದಾಣದ ಮುಂದೆ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದರು
ಬಾಗೇಪಲ್ಲಿಯ ಬಸ್‌ನಿಲ್ದಾಣದ ಮುಂದೆ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದರು   

ಬಾಗೇಪಲ್ಲಿ: ಶಿರಾ ಹಾಗೂ ರಾಜರಾಜೇಶ್ವರಿನಗರದ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಜಯಗಳಿಸಿದ ಹಿನ್ನೆಲೆಯಲ್ಲಿ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಪಟ್ಟಣದ ಬಸ್‌ನಿಲ್ದಾಣದ ಮುಂದೆ ಪಟಾಕಿ ಸಿಡಿಸಿ, ಸಿಹಿ ವಿತರಿಸಿ ಸಂಭ್ರಮಾಚರಣೆ ನಡೆಸಿದರು.

ಬಿಜೆಪಿ ಮಂಡಲ ಅಧ್ಯಕ್ಷ ಆರ್. ಪ್ರತಾಪ್ಮಾತನಾಡಿ, ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ನೇತೃತ್ವದಡಿ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರದ ಆಡಳಿತ ಮೆಚ್ಚಿ, ಮತದಾರರು ಬಿಜೆಪಿಗೆ ಮತ ಚಲಾಯಿಸಿದ್ದಾರೆ ಎಂದರು.

ಮುಂದಿನ ದಿನಗಳಲ್ಲಿ ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷವನ್ನು ಸಂಘಟಿಸಲಾಗುವುದು. ಮುಂಬರುವ ಚುನಾವಣೆಯಲ್ಲಿ ಇಲ್ಲಿಯೂ ಬಿಜೆಪಿ ಅಭ್ಯರ್ಥಿ‌ಯನ್ನು ಗೆಲ್ಲಿಸಲು ಮುಖಂಡರು, ಕಾರ್ಯಕರ್ತರು ಶ್ರಮಿಸಬೇಕು ಎಂದು ಕರೆ ನೀಡಿದರು.

ADVERTISEMENT

ಪಟ್ಟಣದ ಡಾ.ಎಚ್.ಎನ್. ವೃತ್ತದಿಂದ ಚಿತ್ರಾವತಿ ಮೇಲುಸೇತುವೆಯ ವರೆಗೂ ಬೈಕ್ ರ‍್ಯಾಲಿ ನಡೆಸಿದರು. ಎಪಿಎಂಸಿ ಅಧ್ಯಕ್ಷ ಸೋಮಶೇಖರ ರೆಡ್ಡಿ, ಬಿಜೆಪಿ ಜಿಲ್ಲಾ ಎಸ್‌ಟಿ ಮೋರ್ಚಾ ಅಧ್ಯಕ್ಷ ವೆಂಕಟೇಶ್, ಮುಖಂಡರಾದ ವೆಂಕಟೇಶ್, ಆದಿನಾರಾಯಣ, ಗೋಪಾಲ್, ಲೋಕೇಶ್ ಕುಮಾರ್, ಬಾಬಾಜಾನ್, ವೆಂಕಟಲಕ್ಷ್ಮಮ್ಮ, ಮಂಜುಳಾ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.