
ಚಿಕ್ಕಬಳ್ಳಾಪುರ: ವಾರ್ಷಿಕ ₹1.20 ಲಕ್ಷ ಆದಾಯ ಮೀರಿರುವ ಕುಟುಂಬಗಳ ಬಿಪಿಎಲ್ ಪಡಿತರ ಚೀಟಿ ರದ್ದುಗೊಳಿಸಬೇಕು ಎಂದು ಕೇಂದ್ರ ಸರ್ಕಾರ ಸೂಚಿಸಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಆಹಾರ ಇಲಾಖೆ 13,215 ಕುಟುಂಬಗಳ ಬಿಪಿಎಲ್ ಪಡಿತರ ಚೀಟಿ ರದ್ದುಗೊಳಿಸಲು ಮುಂದಾಗಿದೆ.
ಕೇಂದ್ರ ಸರ್ಕಾರದ ಆದೇಶದ ಅನ್ವಯ ಜಿಲ್ಲೆಯ ಆಹಾರ ಮತ್ತು ನಾಗರಿಕರ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ 6,523 ಅನರ್ಹ ಬಿಪಿಎಲ್ ಚೀಟಿಗಳನ್ನು ರದ್ದುಗೊಳಿಸಿದೆ.
ಜಿಲ್ಲೆಯಲ್ಲಿ ಕೇಂದ್ರ ಸರ್ಕಾರವು ಒಟ್ಟು 13,215 ಬಿಪಿಎಲ್ ಕಾರ್ಡ್‌ದಾರರ ಕುಟುಂಬಗಳನ್ನು ಗುರುತಿಸಿ ಆ ಪಡಿತರ ಚೀಟಿಗಳನ್ನು ರದ್ದುಗೊಳಿಸುವಂತೆ ಪಟ್ಟಿ ಸಮೇತ ಆಹಾರ ಇಲಾಖೆಗೆ ನಿರ್ದೇಶನ ನೀಡಿದೆ. ಅದರಂತೆ ಇಲ್ಲಿವರೆಗೂ ಜಿಲ್ಲೆಯಲ್ಲಿ ಆಹಾರ ಇಲಾಖೆ ಅಧಿಕಾರಿಗಳು ಪಡಿತರ ಅಂಗಡಿಗಳ ಮೂಲಕ 6,523 ಬಿಪಿಎಲ್ ಕಾರ್ಡ್‌ಗಳನ್ನು ರದ್ದುಗೊಳಿಸಿದ್ದಾರೆ. ಇನ್ನೂ 6,692 ಬಿಪಿಎಲ್ ಕಾರ್ಡ್‌ಗಳನ್ನು ರದ್ದುಗೊಳಿಸಲು ಬಾಕಿ ಇದೆ.
ಜಿಲ್ಲೆಯಲ್ಲಿ 3,29 ಲಕ್ಷ ಪಡಿತರ ಚೀಟಿ: ಜಿಲ್ಲೆಯಲ್ಲಿ ಒಟ್ಟು 27,815 ಅಂತ್ಯೋದಯ, 2,74,709 ಬಿಪಿಎಲ್ ಹಾಗೂ 27,107 ಎಪಿಎಲ್ ಕಾರ್ಡ್‌ಗಳು ಸೇರಿ ಒಟ್ಟು 3,29,631 ಕಾರ್ಡ್‌ಗಳು ಇವೆ. 11,06,891 ಮಂದಿ ಫಲಾನುಭವಿಗಳು ಇದ್ದಾರೆ.
2.74 ಲಕ್ಷ ಬಿಪಿಎಲ್ ಕಾರ್ಡ್‌ಗಳು: ಜಿಲ್ಲೆಯಲ್ಲಿ ಒಟ್ಟು 2,74,709 ಬಿಪಿಎಲ್ ಪಡಿತರ ಚೀಟಿಗಳು ಇವೆ. ಅದರ ಒಟ್ಟು ಫಲಾನುಭವಿಗಳು 9,11,487 ಮಂದಿ ಇದ್ದಾರೆ. ಕೇಂದ್ರ ಸರ್ಕಾರ ಬಿಪಿಎಲ್ ಕಾರ್ಡ್ ಇರುವ ಪ್ರತಿ ಕುಟುಂಬದ ಸದಸ್ಯನಿಗೆ ತಲಾ 5 ಕೆಜಿ ಅಕ್ಕಿ ವಿತರಿಸುತ್ತಿದೆ. ಇದೀಗ ಕೇಂದ್ರ ಸರ್ಕಾರವೇ ಜಿಲ್ಲೆಯಲ್ಲಿ ಒಟ್ಟು 13,215 ಅರ್ನಹ ಬಿಪಿಎಲ್ ಕಾರ್ಡ್‌ಗಳನ್ನು ಗುರುತಿಸಿ ಅವುಗಳ ರದ್ದಿತಿಗೆ ಮುಂದಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.