
ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಹಾಲು ಒಕ್ಕೂಟದ ಚುನಾವಣೆಯ ಫಲಿತಾಂಶ ಅತಂತ್ರವಾಗಿದೆ. ಅಧಿಕಾರ ಹಿಡಿಯಲು ಕಾಂಗ್ರೆಸ್ ಪಕ್ಷೇತರರು ಮತ್ತು ನಾಮನಿರ್ದೇಶಿತ ಸದಸ್ಯರ ಮೊರೆ ಹೋಗುವ ಸಾಧ್ಯತೆ ಇದೆ.
ಭಾನುವಾರ ಒಕ್ಕೂಟಕ್ಕೆ ಚುನಾವಣೆ ನಡೆಯಿತು. ಒಟ್ಟು 13 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಆರು, ಬಿಜೆಪಿ ಜೆಡಿಎಸ್ ಮೈತ್ರಿಕೂಟ ಐದು ಮತ್ತು ಪಕ್ಷೇತರ ಶಾಸಕ ಕೆ.ಎಚ್.ಪುಟ್ಟಸ್ವಾಮಿಗೌಡ ಬೆಂಬಲಿತ (ಕೆಎಚ್‌ಪಿ ಬಣ) ಇಬ್ಬರು ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ.
ಪೆರೇಸಂದ್ರ ಕ್ಷೇತ್ರದಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಕೆ.ವಿ.ನಾಗರಾಜ್, ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಕಾಂಗ್ರೆಸ್ ಬೆಂಬಲಿತ ಎನ್.ಸಿ.ವೆಂಕಟೇಶ್, ಚಿಂತಾಮಣಿ ಮಹಿಳಾ ಕ್ಷೇತ್ರದಲ್ಲಿ ಕಾಂಗ್ರೆಸ್ ಬೆಂಬಲಿತ ಸುಮಾ, ಮಂಚೇನಹಳ್ಳಿ ಕ್ಷೇತ್ರದಲ್ಲಿ ಕೆಎಚ್‌ಪಿ ಬಣದ ಕಾಂತರಾಜು, ಚಿಕ್ಕಬಳ್ಳಾಪುರ ಮಹಿಳಾ ಕ್ಷೇತ್ರದಲ್ಲಿ ಕೆಎಚ್‌ಪಿ ಬಣದ ಸುಧಾ, ಗೌರಿಬಿದನೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಬೆಂಬಲಿತ ದಿನೇಶ್, ಚಿಂತಾಮಣಿ ಕ್ಷೇತ್ರದಲ್ಲಿ ಕಾಂಗ್ರೆಸ್ ಬೆಂಬಲಿತ ಅಶ್ವತ್ಥನಾರಾಯಣಬಾಬು, ಗುಡಿಬಂಡೆಯಲ್ಲಿ ಕಾಂಗ್ರೆಸ್ ಬೆಂಬಲಿತ ಆದಿನಾರಾಯಣರೆಡ್ಡಿ, ಚೇಳೂರಿನಲ್ಲಿ ಜೆಡಿಎಸ್ ಬೆಂಬಲಿತ ಕೆ.ಎನ್.ಕೃಷ್ಣಾರೆಡ್ಡಿ, ಬಾಗೇಪಲ್ಲಿಯಲ್ಲಿ ಕಾಂಗ್ರೆಸ್ ಬೆಂಬಲಿತ ವಿ.ಮಂಜುನಾಥ ರೆಡ್ಡಿ, ಕೈವಾರ ಕ್ಷೇತ್ರದಲ್ಲಿ ಜೆಡಿಎಸ್ ಬೆಂಬಲಿತ ಕೆ.ಎನ್.ಆವುಲಪ್ಪ, ಜಂಗಮಕೋಟೆಯಲ್ಲಿ ಜೆಡಿಎಸ್ ಬೆಂಬಲಿತ ಹುಜಗೂರು ರಾಮಯ್ಯ, ಶಿಡ್ಲಘಟ್ಟದಲ್ಲಿ ಜೆಡಿಎಸ್ ಬೆಂಬಲಿತ ಬಂಕ್ ಮುನಿಯಪ್ಪ ಗೆಲುವು ಸಾಧಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.